ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಯನಗರ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆ

By Nayana
|
Google Oneindia Kannada News

ಬೆಂಗಳೂರು, ಜೂನ್ 6: ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್ 11ರಂದು ನಡೆಯಲಿದ್ದು, ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಮಿಕರಿಗೂ ವೇತನ ಸಹಿತ ರಜೆ ನಿಡುವುದಾಗಿ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ.

ಜಯನಗರ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಜಯನಗರ ಕ್ಷೇತ್ರದ ಕಾರ್ಮಿಕರಿಗೆ ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಅನ್ವಯ ಜೂನ್‌ 11 ರಂದು ವೇತನ ಸಹಿತ ರಜೆ ಘೋಷಿಸಲಾಗಿದೆ.

ಜೂನ್‌ 11ಕ್ಕೆ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಜೂನ್‌ 11ಕ್ಕೆ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ

ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸಲು ಅನುವು ಮಾಡಿಕೊಡುವ ದೃಷ್ಟಿಯಿಂದ ಎಲ್ಲಾ ಕಾರ್ಖಾನೆಗಳ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೂಚಿಸಲಾಗಿದೆ, ತಪ್ಪಿದಲ್ಲಿ ಸಂಬಂಧ ಪಟ್ಟ ಸಂಸ್ಥೆಗಳ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka assembly elections 2018: Jayanagara poll: Holiday declared

ಮೇ 12ರಂದು ಸಾರ್ವತ್ರಿಕ ಚುನಾವಣೆ ನಡೆದಿತ್ತು. ಆದರೆ ಜಯನಗರ ಹಾಗೂ ರಾಜರಾಜೇಶ್ವರಿನಗರ ಚುನಾವಣೆಯನ್ನು ಮುಂದೂಡಲಾಗಿತ್ತು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಚುನಾವಣೆ ಮುಗಿದು ಮುನಿರತ್ನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್, ವಿಜಯಕುಮಾರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಜೂನ್ 16ಕ್ಕೆ ಫಲಿತಾಂಶ ಹೊರಬೀಳಲಿದೆ.

English summary
Labor commissionaire has declared holiday for all private sector companies and commercial establishments with salary facility on June 11 following the polling in Jayanagara assembly constituency
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X