ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಧಿ ವಿಸ್ತರಣೆ

Posted By:
Subscribe to Oneindia Kannada

ಬೆಂಗಳೂರು, ಜನವರಿ 05 : 2018 ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯನ್ನು ವಿಸ್ತರಿಸಿದ್ದು, ಜನವರಿ 12ರವರೆಗೆ ವಿಶೇಷ ಪರಿಷ್ಕರಣೆಗೆ ಅವಕಾಶ ನೀಡಲಾಗಿದೆ.

ವೋಟರ್ ಐಡಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಈ ಹಿಂದೆ ಇದ್ದ ಡಿಸೆಂಬರ್ 29 ಕೊನೆ ದಿನಾಂಕವನ್ನು ಜನವರಿ 12ರ ವರೆಗೆ ಬಿಬಿಎಂಪಿ ವ್ಯಾಪ್ತಿಯ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ ಹೆಸರು ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

 Karnataka assembly elections 2018 last date to add names from voter list is Jan 12

ಜನವರಿ 1 ರವರೆಗೆ ಬೆಂಗಳೂರಿನಲ್ಲಿ ಒಟ್ಟು 85,92,815 ಮತದಾರರ ನೊಂದಣಿಯಾಗಿದ್ದು, ಹೊಸದಾಗಿ 95 ಸಾವಿರ ಮಂದಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ 25483 ಮಂದಿ ತಮ್ಮ ಹೆಸರನ್ನು ರದ್ದು ಮಾಡಿಸಿದ್ದಾರೆ. ಇನ್ನು 15206 ಜನರು ತಮ್ಮ ಹೆಸರನ್ನು ಬದಲಾವಣೆ ಮಾಡಿಸಿಕೊಂಡಿದ್ದಾರೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.

ಫೆಬ್ರವರಿ 20ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುವುದು. ವೋಟರ್ ಐಡಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಆಯುಕ್ತರು ಸ್ಪಷ್ಟಪಡಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka assembly elections 2018, add delete names from voter list the last date extended to January 12 from December 26th only in BBMP limits, said BBMP BBMP commissioner Manjunath Prasad.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ