ರುದ್ರೇಶ್ ಕೊಲೆ ಪ್ರಕರಣ: ಬಿಜೆಪಿ ನಾಯಕರ ಖಂಡನೆ

Posted By: Prithviraj
Subscribe to Oneindia Kannada

ಬೆಂಗಳೂರು, ಅಕ್ಟೋಬರ್, 17: ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಅವರ ಹತ್ಯೆ ಖಂಡಿಸಿ ಬಿಜೆಪಿ ಮುಖಂಡರು ಸೋಮವಾರ ಶಿವಾಜಿನಗರದಲ್ಲಿ ಪ್ರತಿಭಟನೆ ನಡೆಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಮಾಜಿ ಡಿಸಿಎಂ ಆರ್. ಅಶೋಕ ಮತನಾಡಿ "ಸರ್ಕಾರ ತನಿಖೆ ನಡೆಸುವುದನ್ನು ಬಿಟ್ಟು, ಕೊಲೆಯಾದ ರುದ್ರೇಶ್ ಅವರ ಚಾರಿತ್ರ್ಯವಧೆ ಮಾಡುತ್ತಿದೆ. ಈ ಮೂಲಕ ಪ್ರಕರಣದ ದಿಕ್ಕು ತಪ್ಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.[ರುದ್ರೇಶ್ ಕೊಲೆ ಪ್ರಕರಣ: ಭುಗಿಲೆದ್ದ ಬಿಜೆಪಿ ಆಕ್ರೋಶ]

ರುದ್ರೇಶ್ ಕೊಲೆ ಪ್ರಕರಣ: ಬಿಜೆಪಿ ನಾಯಕರ ಖಂಡನೆ

ರಾಜ್ಯ ಸರ್ಕಾರದ ಆಡಳಿತದಲ್ಲಿ ಕೊಲೆಗಳು ಹೆಚ್ಚಾಗುತ್ತಿವೆ. ಕೊಲೆಗಡುಕರ ರಕ್ಷಣೆಗಾಗಿ ರಾಜ್ಯ ಸರ್ಕಾರ ನಿಂತಿದೆ. ನಿಮ್ಮ ಸಾಂತ್ವಾನ ನಮಗೆ ಬೇಕಿಲ್ಲ. ಪೊಲೀಸರು ಕೂಡಲೇ ಕೊಲೆಗಡುಕರನ್ನು ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. [ರುದ್ರೇಶ್ ಕೊಲೆ: ಅರ್ ಎಸ್ ಎಸ್ ನಿಂದ ಶಿವಾಜಿನಗರ ಬಂದ್]

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಕೊಲೆಯಾದ ಸ್ಥಳದಲ್ಲಿ ಹಲವು ಸಿಸಿಟಿವಿ ಕ್ಯಾಮೆರಾಗಳನ್ನು ಇಡಲಾಗಿದ್ದು, ಕೂಡಲೇ ಪರಿಶೀಲಿಸಬೇಕು ಎಂದು ಶಾಸಕ ಸುರೇಶ್ ಕುಮಾರ್ ಒತ್ತಾಯಿಸಿದರು. ['ರುದ್ರೇಶ್ ಏನು ಗೋಕಳ್ಳನಲ್ಲ, ಇದು ತಾಲಿಬಾನಿ ಮಾದರಿ ಹತ್ಯೆ']

ರುದ್ರೇಶ್ ಕೊಲೆ ಪ್ರಕರಣ: ಬಿಜೆಪಿ ನಾಯಕರ ಖಂಡನೆ

ಘಟನೆ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕೊಲೆಯಾದ ವ್ಯಕ್ತಿ ಆರ್ ಎಸ್ ಎಸ್ ಕಾರ್ಯಕರ್ತ ಎಂಬ ಮಾಹಿತಿಯಷ್ಟೇ ತಿಳಿದು ಬಂದಿದೆ ಈ ಕುರಿತ ಬೇರೆ ಮಾಹಿತಿ ಇಲ್ಲ. ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊಲೆಯಾದ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದ್ದು, ಸ್ಥಳೀಯರಿಂದ ಸಿಸಿಬಿ ಪೋಲಿಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP leaders condemn RSS worker Rudresh brutal murder and failure of the government in maintaining law and order in the state
Please Wait while comments are loading...