ಎಸಿಬಿ ರಚನೆ ವಿವಾದ : ಸರ್ಕಾರಕ್ಕೆ ಗಡುವು ಕೊಟ್ಟ ಬಿಜೆಪಿ

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 28 : ಕರ್ನಾಟಕ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು. ಸರ್ಕಾರ ಈ ವಿಚಾರದಲ್ಲಿ ಹಠ ಮುಂದುವರೆಸಿದರೆ ಕಾನೂನು ಹೋರಾಟವನ್ನು ನಡೆಸಲಾಗುತ್ತದೆ ಎಂದು ನಾಯಕರು ಎಚ್ಚರಿಕೆ ನೀಡಿದರು. [ಸುದ್ದಿದನಿ : ಬಿಜೆಪಿ ನಾಯಕರ ಪ್ರತಿಭಟನೆ]

ಸರ್ಕಾರ ಎಸಿಬಿ ರಚನೆಯ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ನಾಯಕರು ಸೋಮವಾರ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸರ್ಕಾರ ತನ್ನ ಆದೇಶ ವಾಪಸ್ ಪಡೆಯುವ ತನಕ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ನಾಯಕರು ಹೇಳಿದರು. [ಎಸಿಬಿ ವಿವಾದ : ಕಾಂಗ್ರೆಸ್ ಹೈಕಮಾಂಡಿಗೆ ಬಿಜೆಪಿ, ಜೆಡಿಎಸ್ ಪತ್ರ]

bjp

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ ಅನಂತ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಂತಾದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. [ಎಸಿಬಿ ಬಗ್ಗೆ ಗೊಂದಲ : ಸಿದ್ದರಾಮಯ್ಯ ನೀಡಿದ ಸ್ಪಷ್ಟನೆಗಳು]

-
-
-
-
-

ಕಾನೂನು ಹೋರಾಟ ಮಾಡುತ್ತೇವೆ : ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಎಸಿಬಿ ರಚನೆ ಆದೇಶವನ್ನು ವಾಪಸ್ ಪಡೆಯುವ ತನಕ ಬಿಜೆಪಿ ಹೋರಾಟ ಮಾಡಲಿದೆ. ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟವನ್ನು ಮಾಡಬೇಕಾಗುತ್ತದೆ' ಎಂದು ಎಚ್ಚರಿಕೆ ನೀಡಿದರು. [ಎಸಿಬಿ ರಚನೆ : ಸರ್ಕಾರಕ್ಕೆ ಶೆಟ್ಟರ್ ಕೇಳಿದ ಪ್ರಶ್ನೆಗಳು]

-
-
-
-
-

ಶಾಸಕರ ವಿರೋಧ ಕಟ್ಟಿಕೊಂಡಿದ್ದಾರೆ : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ವಿರೋಧವನ್ನು ಕಟ್ಟಿಕೊಂಡು ಎಸಿಬಿ ರಚನೆ ಮಾಡಿದ್ದಾರೆ. ಆದೇಶವನ್ನು ಸರ್ಕಾರ ವಾಪಸ್ ಪಡೆಯುವ ತನಕ ಬಿಜೆಪಿ ವಿವಿಧ ಹಂತಗಳಲ್ಲಿ ಹೋರಾಟ ಮಾಡಲಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು. [ಭ್ರಷ್ಟಾಚಾರ ನಿಗ್ರಹ ದಳದ ಯಾವ ಕಚೇರಿ ಎಲ್ಲಿರುತ್ತದೆ?]

-
-
-
-
-
-
-
-

ಭ್ರಷ್ಟಾಚಾರ ನಿಗ್ರಹ ದಳ (Anti Corruption Bureau- ACB) ಸ್ಥಾಪನೆ ಮಾಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆಗಳನ್ನು ನೀಡುತ್ತಲೇ ಇದ್ದಾರೆ. ಆದರೆ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇದನ್ನು ವಿರೋಧಿಸುತ್ತಿದ್ದು, ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಹೋರಾಟ ನಡೆಸುತ್ತಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka opposition party BJP on Monday, March 28, 2016 continued its protest against formation of Anti Corruption Bureau (ACB). BJP leaders staged a day-long dharna before the Mahatma Gandhi statue near Maurya circle near Anand Rao circle, Bengaluru.
Please Wait while comments are loading...