ಎಸಿಬಿ ದುರ್ಬಳಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಣಕಹಳೆ

Posted By:
Subscribe to Oneindia Kannada

ಬೆಂಗಳೂರು. ಆಗಸ್ಟ್ 20 : ಅಮಿತ್ ಶಾ ಅವರು ತರಾಟೆಗೆ ತೆಗೆದುಕೊಂಡಿರುವ ಬಳಿಕ ಎಚ್ಚೇತ್ತಿರುವ ರಾಜ್ಯ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರುತ್ತಿದ್ದಾರೆ.

ಬಿಎಸ್‌ವೈ ವಿರುದ್ಧ ಎಫ್‌ಐಆರ್ : ಹೊಸ ತಿರುವು, ಪತ್ರ ಸ್ಫೋಟ!

ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದ ಬಳಿಕ ಇದೀಗ ಎಸಿಬಿಯನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಇಂದು (ಭಾನುವಾರ) ಬೆಂಗಳೂರಿನ ಮೈಸೂರು ವೃತ್ತದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ.

Karnataka BJP protest in bengaluru against state govt misuse ACB

ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಎಸಿಬಿಯಲ್ಲಿ ಎಫ್‌ಐಆರ್ ದಾಖಲಾಯಿಸುವ ಮೂಲಕ ಎಸಿಬಿಯನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳಿತ್ತಿದೆ ಎಂದು ಆರ್ ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

Karnataka BJP protest in bengaluru against state govt misuse ACB

ಇದೇ ಎಸಿಬಿ ವಿಚಾರದಲ್ಲಿ ನಾಳೆಯಿಂದ ರಾಜ್ಯವ್ಯಾಪಿ ಪ್ರತಿಭಟನೆಯನ್ನು ಬಿಜೆಪಿ ಆಯೋಜಿಸಿದೆ. ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಸಿಕ್ಕ ಸಣ್ಣ ಅವಕಾಶವನ್ನೂ ಪ್ರಬಲವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಯೋಚನೆ ಮಾಡುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP protest protest at Mysuru circle in Bangaluru today (Sunday), claiming that the state government is exploiting the ACB.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ