ಜೆಡಿಎಸ್‌ ಸೇರಿದ ಮಾಜಿ ಶಾಸಕ ಹೇಮಚಂದ್ರ ಸಾಗರ್

Posted By: Gururaj
Subscribe to Oneindia Kannada

ಬೆಂಗಳೂರು, ಏಪ್ರಿಲ್ 16 : ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಹೇಮಚಂದ್ರ ಸಾಗರ್ ಜೆಡಿಎಸ್ ಸೇರಿದರು. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅವರು ಅಸಮಾಧಾನಗೊಂಡು ಪಕ್ಷ ತೊರೆದಿದ್ದರು.

ಚಿಕ್ಕಪೇಟೆ ಬಿಜೆಪಿ ಟಿಕೆಟ್‌ಗೆ 5ಕ್ಕೂ ಹೆಚ್ಚು ಆಕಾಂಕ್ಷಿಗಳು!

ಸೋಮವಾರ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರ ಸಮ್ಮುಖದಲ್ಲಿ ಹೇಮಚಂದ್ರ ಸಾಗರ್ ಅವರು ಜೆಡಿಎಸ್ ಸೇರಿದರು. ಚಿಕ್ಕಪೇಟೆ ಕ್ಷೇತ್ರದಿಂದ ಅವರು ಪಕ್ಷದ ಅಭ್ಯರ್ಥಿಯಾಗಿ 2018ರ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಹೇಮಚಂದ್ರ ಸಾಗರ್ ಅವರು ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕರು. 2008ರ ಚುನಾವಣೆಯಲ್ಲಿ ಅವರು 40,252 ಮತಗಳನ್ನು ಪಡೆದು ಜಯಗಳಿಸಿದ್ದರು. 2013ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ.

Karnataka elections : Former MLA Hemachandra Sagar joins JDS

2018ರ ಚುನಾವಣೆಗೆ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಉದಯ್ ಗರುಡಾಚಾರ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಆದ್ದರಿಂದ. ಹೇಮಚಂದ್ರ ಸಾಗರ್ ಅವರು ಬಿಜೆಪಿ ತೊರೆದಿದ್ದರು.

ಬೆಂಗಳೂರಿನ ಪುರಾತನ ಬಡಾವಣೆ ಚಿಕ್ಕಪೇಟೆ ಪರಿಚಯ

ಕಳೆದ ವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹೇಮಚಂದ್ರ ಸಾಗರ್ ಅವರು ಇಂದು ಜೆಡಿಎಸ್ ಸೇರಿದ್ದಾರೆ. 2018ರ ಚುನಾವಣೆಗೆ ಅವರು ಚಿಕ್ಕಪೇಟೆ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chickpet assembly constituency former MLA Hemachandra Sagar joined JD(S) on April 16, 2018. Hemachandra Sagar upset with BJP leaders after party dined ticket for him form Chickpet. He resigned for party membership last week.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ