ವಿಶ್ವಾಸಮತ : ಎಲ್ಲ ಕಣ್ಣು 20 ಲಿಂಗಾಯತ ಶಾಸಕರ ಮೇಲೆ
Recommended Video

ಬೆಂಗಳೂರು, ಮೇ 19 : ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತಕ್ಕೆ ಗಂಟೆಗಣನೆ ಶುರುವಾಗಿರುವಾಗ ಎಲ್ಲರ ಕಣ್ಣುಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿರುವ 20 ಲಿಂಗಾಯತ ಶಾಸಕರ ಮೇಲಿದೆ.
ಅವರು ಲಿಂಗಾಯತ ಸಮುದಾಯದ ನಾಯಕ ಯಡಿಯೂರಪ್ಪ ಜಯಿಸುವಂತೆ ಮಾಡುತ್ತಾರಾ? ಅಥವಾ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೇ ಮತ ಹಾಕಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯದಂತೆ ಮಾಡುತ್ತಾರಾ? ಕಾಂಗ್ರೆಸ್ಸಿನಲ್ಲಿ 18 ಲಿಂಗಾಯತ ಶಾಸಕರಿದ್ದರೆ, ಜೆಡಿಎಸ್ ನಲ್ಲಿ ಇಬ್ಬರಿದ್ದಾರೆ.
ಇದು ಕರ್ನಾಟಕದ ಜನತೆಗೆ ಚಿದಂಬರ ರಹಸ್ಯವಾಗಿ ಕಾಡುತ್ತಿದೆ. ಲಿಂಗಾಯತ ನಾಯಕರು ಬಿಜೆಪಿಗೆ ಅಡ್ಡಮತ ಹಾಕಿ ಬಿಜೆಪಿಯನ್ನು ಸಂಕಷ್ಟದಿಂದ ಪಾರು ಮಾಡುತ್ತಾರೆ ಎಂದು ಭಾರತೀಯ ಜನತಾ ಪಕ್ಷ ಬಲವಾಗಿ ನಂಬಿದೆ. ಒಂದು ರೀತಿಯಲ್ಲಿ ಈ ಲಿಂಗಾಯತ ಶಾಸಕರು ವಿಚಿತ್ರ ಧರ್ಮಸಂಕಟದಲ್ಲಿ ಸಿಲುಕಿಕೊಂಡಿದ್ದಾರೆ.

ಒಂದು ಕಡೆ ಅವರು ವಿರೋಧ ಪಕ್ಷಗಳಲ್ಲಿದ್ದರೆ ಮತ್ತೊಂದೆಡೆ ಲಿಂಗಾಯತ ನಾಯಕನನ್ನು ಬೆಂಬಲಿಸಬೇಕಾ ಬೇಡವಾ ಎಂಬ ಸಂದಿಗ್ಧತೆ. ಪಕ್ಷಕ್ಕೆ ಮತ್ತು ಆ ಪಕ್ಷದ ನಾಯಕರ ಆದೇಶಕ್ಕೆ ತಲೆಬಾಗಿದರೆ ಮತ್ತು ಆಮಿಷಗಳಿಗೆ ಬಲಿಯಾಗದಿದ್ದರೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಬಲುಕಷ್ಟ.
ವಿಚಿತ್ರ ದ್ವಂದ್ವದಲ್ಲಿ ಲಿಂಗಾಯತ ನಾಯಕರು ಮುಳುಗಿದ್ದಾರೆ. ಒಂದು ವೇಳೆ ಅವರು ಯಡಿಯೂರಪ್ಪನವರಿಗೆ ಬೆಂಬಲ ನೀಡಿ ಅಡ್ಡಮತದಾನ ಮಾಡಿದರೆ ಅವರ ರಾಜಕೀಯ ಜೀವನವೇ ಸಂಕಷ್ಟದಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗದಂತೆ ತಡೆದರೆ ಲಿಂಗಾಯತ ಮತದಾರರು ಸಿಟ್ಟಾಗಲೂಬಹುದು.
ರಾಜಕೀಯವಾಗಿ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದ್ದು ತಮ್ಮ ಸಾಧನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳಬಹುದು. ಆದರೆ, ಇದು ಲಿಂಗಾಯತರನ್ನು ಕೆರಳಿಸಿರುವುದು ಸುಳ್ಳಲ್ಲ. ಏಕೆಂದರೆ, ಶೇ.60ಕ್ಕಿಂತಲೂ ಹೆಚ್ಚು ಮತದಾರರು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಟ್ಟು ಅವರ ಪಕ್ಷಕ್ಕೆ ಮತಹಾಕಿದ್ದಾರೆ.
ತಕ್ಕ ಶಾಸ್ತಿಯೆಂಬಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಭಾಗಿಯಾಗಿದ್ದ ಪ್ರಮುಖ ನಾಯಕರಾದ ವಿನಯ್ ಕುಲಕರ್ಣಿ, ಡಾ. ಶರಣ ಪ್ರಕಾಶ್ ಪಾಟೀಲ ಮತ್ತು ಬಸವರಾಜ ರಾಯರೆಡ್ಡಿ ಅವರನ್ನು ಮತದಾರರು ಸೋಲಿಸಿ ಮನೆಗೆ ಕಳಿಸಿದ್ದಾರೆ.
ಶಾಸಕರು ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ವಿಶ್ವಾಸಮತದಲ್ಲಿ ಮತದಾನ ಮಾಡಬೇಕಾಗಿ ಯಡಿಯೂರಪ್ಪನವರು ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ ಯಡಿಯೂರಪ್ಪ.
ಈಗ ತೆಗೆದುಕೊಳ್ಳುವ ಯಾವುದೇ ನಿರ್ಧಾರ 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮೇಲೂ ಪರಿಣಾಮ ಬೀರಿದರೂ ಅಚ್ಚರಿಯಿಲ್ಲ. 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 17 ಕ್ಷೇತ್ರಗಳನ್ನು 2014ರಲ್ಲಿ ತನ್ನದಾಗಿಸಿಕೊಂಡಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications