ಮಾಜಿ ಸಚಿವ ಸಿ.ಎಚ್ ವಿಜಯ್ ಶಂಕರ್ ಬಿಜೆಪಿಗೆ ಗುಡ್ ಬೈ

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 28: ಹಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ಸಿ.ಎಚ್ ವಿಜಯ್ ಶಂಕರ್ ಅವರು ಶನಿವಾರ ಅಧಿಕೃತವಾಗಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಮೈಸೂರು ಬಿಜೆಪಿ ಸಮಾವೇಶಕ್ಕೆ ವಿಜಯ್ ಶಂಕರ್ ಗೈರು, ಪಕ್ಷಕ್ಕೆ ಹಿನ್ನಡೆ!

ಕುರುಬ ಸಮುದಾಯದ ಪ್ರಭಾವಿ ಮುಖಂಡ ಹಾಗೂ ರಾಜ್ಯ ಬಿಜೆಪಿಯ ರೈತ ಮೋರ್ಚ ರಾಜ್ಯಾಧ್ಯಕ್ಷರಾಗಿದ್ದ ವಿಜಯ್ ಶಂಕರ್ ಅವರು ಫ್ಯಾಕ್ಸ್ ಮೂಲಕ ತಮ್ಮ ರಾಜೀನಾಮೆ ಪತ್ರವನ್ನು ಬಿ ಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ.

Karnataka former minister C.H Vijay Shankar quits BJP

ಗುರುವಾರ ಮೈಸೂರಿನಲ್ಲಿ ನಡೆದ ಬೃಹತ್ ರೈತ ಸಮಾವೇಶಕ್ಕೆ ವಿಜಯ್ ಶಂಕರ್ ಗೈರಾಗಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ತೊರೆದಿರುವ ವಿಜಯ್ ಶಂಕರ್ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಿರಿಯಾಪಟ್ಟಣದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಕುರುಬ ಸಮುದಾಯಕ್ಕೆ ಸೇರಿದ ವಿಜಯ್ ಶಂಕರ್ ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಕೊಂಚ ಹಿನ್ನಡೆಯಾಗಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former minister and Kuruba community strongman C.H.Vijayashankar quits BJP on October 28.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ