10,899 ಪೌರ ಕಾರ್ಮಿಕ ಹುದ್ದೆ ಭರ್ತಿಗೆ ಕರ್ನಾಟಕ ಸಚಿವ ಸಂಪುಟ ನಿರ್ಧಾರ

Posted By:
Subscribe to Oneindia Kannada

ಬೆಂಗಳೂರು, ಜುಲೈ 13: ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 10,899 ಪೌರ ಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

1000 ಪೌರ ಕಾರ್ಮಿಕರನ್ನು ಸಿಂಗಪುರಕ್ಕೆ ಕಳಿಸುತ್ತಿದೆ ರಾಜ್ಯ ಸರ್ಕಾರ

ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಸೇರಿದಂತೆ ವಿವಿಧ ನಗರಗಳಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಾಗ, ಸದ್ಯಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡಲು ರೂಪಿಸಿರುವ ನೇಮಕಾತಿ ನಿಯಮಗಳಿಗೆ ಜು.12 ರಂದು ಸಚಿವ ಸಂಪುಟ ಅನುಮೋದನೆ ಸೂಚಿಸಿದೆ.

Karnataka Government appoints 10,899 civic workers in various city corporations

ರಾಯಚೂರು, ವಿಜಯಪುರ, ಕೊಪ್ಪಳ, ಬೀದರ್, ಯಾದಗಿರಿ, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ಹಾವೇರಿ, ಕಲಬುರ್ಗಿ ಸೇರಿದಂತೆ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಸತಿ ಸಹಿತ ಮಾದರಿ ಶಾಲೆ ಸ್ಥಾಪಿಸಲೂ ಇದೇ ಸಂದರ್ಭದಲ್ಲಿ ತೀರ್ಮಾನಿಸಲಾಯಿತು.

ಪೊಲೀಸ್ ಇಲಾಖೆಯ ನಿವೃತ್ತ ನೌಕರರು ಮತ್ತು ಅವರ ಕುಟುಂಬಕ್ಕೆ ಆರೋಗ್ಯ ಸೇವೆ ನೀಡುವುದು, ಆರೋಗು ಪತ್ತೆ ಉಪಕರಣ ಖರೀದಿ ಸೇರಿದಂತೆ ಹಲವು ಮಹತ್ವದ ತೀರ್ಮಾನವನ್ನು ಸಂಪುಟದಲ್ಲಿ ತೆಗೆದುಕೊಳ್ಳಲಾಯಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka government, in it's cabinet meeting, which has held on 12th July has decided to appoint 10,899 poura karmikas (civic workers) in various city corporations.
Please Wait while comments are loading...