ಎಚ್ಡಿಕೆ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

Posted By:
Subscribe to Oneindia Kannada

ಬೆಂಗಳೂರು, ಜೂನ್ 15 : ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾಗೊಂಡು ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ.

ಮುಂದಿನ ವಿಚಾರಣೆ ಮುಗಿಯುವವರೆಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ವಿಶೇಷ ತನಿಖಾ ದಳ(ಎಸ್‌ಐಟಿ)ಕ್ಕೆ ಗುರುವಾರ ಹೈಕೋರ್ಟ್‌ ಆದೇಶ ನೀಡಿದೆ. ಇದರಿಂದ ಎಚ್ಡಿಕೆ ಕೊಂಚ ನಿರಾಳರಾಗಿದ್ದಾರೆ.

ಜಂತಕಲ್ ಮೈನಿಂಗ್: ಎಚ್ಡಿಕೆ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Karnataka HC directs SIT not to arrest HD Kumaraswamy till next hearing

ಮುಖ್ಯಮಂತ್ರಿಯಾಗಿದ್ದ ವೇಳೆ ಅಕ್ರಮವಾಗಿ ಜಂತಕಲ್ ಗಣಿ ಕಂಪೆನಿ ಅನುಮತಿ ನೀಡಿದ್ದಾರೆ ಎಂಬ ಅರೋಪ ಕುಮಾರಸ್ವಾಮಿ ಅವರ ಮೇಲಿದೆ.

ಹಾಗಾಗಿ ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನು ಕೋರಿ ಎಸ್‌ಐಟಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿತ್ತು.

ಜನಾರ್ದನ ರೆಡ್ಡಿ, ಎಚ್ಡಿಕೆ ಗಣಿಗಾರಿಕೆಗೆ ಹೊಸ ತಿರುವು! ಸಿಡಿಯುತ್ತಾ ರೆಡ್ಡಿ ಬಾಂಬ್

ಬಳಿಕ ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾ.ರತ್ನಕಲಾ ಅವರು ಪ್ರಕರಣವನ್ನು ಮುಂದೂಡಿದ್ದು, ಮುಂದಿನ ವಿಚಾರಣೆ ಮುಗಿಯುವವರೆಗೂ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka High Court on Thursday directed Special Investigation Team not to arrest former CM HD Kumaraswamy till next hearing in connection with Jantakal Mining case.
Please Wait while comments are loading...