ಸರ್ಕಾರಿ ಆಸ್ಪತ್ರೆಗೆ ದಾಖಲಾದ ಸಚಿವ ರಮೇಶ್ ಕುಮಾರ್

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 04: ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಖಾತೆ ಸಚಿವ ಕೆ ಆರ್ ರಮೇಶ್ ಕುಮಾರ್ ಅವರು ಅನಾರೋಗ್ಯ ಪೀಡಿತರಾಗಿದ್ದಾರೆ. ಹೊಟ್ಟೆ ನೋವು, ವೈರಲ್ ಫೀವರ್ ನಿಂದ ಬಳಲುತ್ತಿದ್ದ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈರಲ್ ಫೀವರ್ ನಿಂದ ಬಳಲುತ್ತಿರುವ ರಮೇಶ್ ಕುಮಾರ್ ಅವರು ಖಾಸಗಿ ಆಸ್ಪತ್ರೆ ಬದಲಿಗೆ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ವಿಶೇಷ.

Karnataka Health Minister Ramesh Kumar Admitted to Bowring Hospital

ಬೆಳಗಾವಿ ಅಧಿವೇಶನದಲ್ಲಿ ಸಚಿವ ರಮೇಶ್ ಕುಮಾರ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಮತ್ತು ಬೆಳಗಾವಿ ಜಿಲ್ಲಾಸ್ಪತ್ರೆಗಳು, ಶಿರಾ ತಾಲ್ಲೂಕು ಆಸ್ಪತ್ರೆಗಳಲ್ಲಿ 8 ಟ್ರಾಮಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.[ಮಾಜಿ ಸಂಸದೆ ರಮ್ಯಾಗೆ ಜ್ವರ, ಮಲ್ಯ ಆಸ್ಪತ್ರೆಗೆ ದಾಖಲು]

ಮೈಸೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಟ್ರಾಮಾ ಕೇಂದ್ರ ಸ್ಥಾಪನೆ ಪ್ರಗತಿಯಲ್ಲಿದೆ. ಆಪತ್‍ ಬಾಂಧವ ಯೋಜನೆಯಡಿ ಇನ್ನೂ 8 ಆಸ್ಪತ್ರೆಗಳಲ್ಲಿ ಹೊಸ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಹರೀಶ್ ಸಾಂತ್ವನ ಯೋಜನೆಯನ್ನು ಜಾರಿಗೆ ತಂದು ತುರ್ತು ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Health and Family welfare Minister Ramesh Kumar has been admitted to Bowring Hospital in Bengaluru, Ramesh Kumar is suffering from Stomach ache and Fever has chosen government hospital instead of Private Hospital.
Please Wait while comments are loading...