ನಾಳೆ ಯಡಿಯೂರಪ್ಪ ರಾಜಕೀಯ ಭವಿಷ್ಯ ನಿರ್ಧಾರ?

Posted By:
Subscribe to Oneindia Kannada
   B S Yeddyurappa gets temporary relief from De notification case

   ಬೆಂಗಳೂರು, ಆಗಸ್ಟ್ 29: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕೈಗೊಂಡಿರುವ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಆಗಸ್ಟ್ 30ರಂದು ಮತ್ತೆ ವಿಚಾರಣೆಗೆ ಬರಲಿದೆ.

   ಯಡಿಯೂರಪ್ಪ ವಿರುದ್ಧ ಎಸಿಬಿ ವತಿಯಿಂದ 3 ಎಫ್ಐಆರ್ ದಾಖಲು

   ಇದೇ ತಿಂಗಳ 17ರಂದು ಎಸಿಬಿಯು ಯಡಿಯೂರಪ್ಪ ವಿರುದ್ಧ ಮೂರು ಎಫ್ಐಆರ್ ಗಳನ್ನು ದಾಖಲಿಸಿತ್ತು. ಇದರ ವಿರುದ್ಧ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ, ಆಗಸ್ಟ್ 23ರಂದು ಎಸಿಬಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್, ಯಡಿಯೂರಪ್ಪ ವಿರುದ್ಧದ ತನಿಖೆಗೆ ಆಗಸ್ಟ್ 28ರವರೆಗೆ ತಾತ್ಕಾಲಿಕ ತಡೆ ನೀಡಿತ್ತು.

   Karnataka High Court extends stay on action against B S Yeddyurappa

   ಆದರೆ, ಆಗಸ್ಟ್ 28ರಂದು ಮತ್ತೆ ಇದರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಹೀಗಾಗಿ, ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ಆಗಸ್ಟ್ 30ರಂದು ಗೊತ್ತಾಗಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   The Karnataka High Court on Monday extended till August 30 its interim order directing the Anti Corruption Bureau (ACB) not to proceed with any prosecutive action against state BJP president B.S. Yeddyurappa in an alleged illegal land denotification matter.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ