ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಾನಂದ ಸರ್ಕಲ್ ಉಕ್ಕಿನ ಸೇತುವೆ ಯೋಜನೆಗೆ ತಡೆ ಇಲ್ಲ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 26 : ಬೆಂಗಳೂರು ನಗರದ ಶಿವಾನಂದ ವೃತ್ತದ ಬಳಿ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಶಿವಾನಂದ ಸರ್ಕಲ್‌ನಿಂದ-ರೇಸ್‌ಕೋರ್ಸ್ ರಸ್ತೆಯ ತನಕ ಉಕ್ಕಿನ ಸೇತುವೆ ನಿರ್ಮಾಣವಾಗಲಿದೆ.

ಉಕ್ಕಿನ ಮೇಲ್ಸೇತುವೆ ಕಾಮಗಾರಿಗೆ ತಡೆ ನೀಡಬೇಕು ಎಂದು ಕುಮಾರಪಾರ್ಕ್ ಪೂರ್ವದ ನಿವಾಸಿ ಬಿ.ಪಿ.ಮಹೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಶೇಷಾದ್ರಿಪುರಂ ರಸ್ತೆಯ ಕಡೆ ಸಾಗುವ ವಾಹನಗಳು ಹೆಚ್ಚು. ಆದ್ದರಿಂದ, ಆ ಮಾರ್ಗದಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದರು.

ಶಿವಾನಂದ ಸರ್ಕಲ್ ಮೇಲ್ಸೇತುವೆ ವಿರುದ್ಧದ ಪಿಐಎಲ್ ವಜಾಶಿವಾನಂದ ಸರ್ಕಲ್ ಮೇಲ್ಸೇತುವೆ ವಿರುದ್ಧದ ಪಿಐಎಲ್ ವಜಾ

Karnataka High Court refuses to stay Shivananda circle steel flyover

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್, ಪಿ.ಎಸ್.ದಿನೇಶ್ ಕುಮಾರ್ ನೇತೃತ್ವದ ಪೀಠ. ಸೇತುವೆ ಕಾಮಗಾರಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿತು. ನವೆಂಬರ್ 3ಕ್ಕೆ ವಿಚಾರಣೆಯನ್ನು ಮುಂದೂಡಿತು.

ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಗೂ ಜನರ ವಿರೋಧಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಗೂ ಜನರ ವಿರೋಧ

ವಾದ ಮಂಡನೆ ಮಾಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, 'ಈ ವಿಚಾರದಲ್ಲಿ ಸ್ಥಳೀಯರು ಹಾಗೂ ಅರ್ಜಿದಾರರ ಅಹವಾಲು ಆಲಿಸಿ ಆದೇಶ ನೀಡಲು ಈಗಾಗಲೇ ವಿಭಾಗೀಯ ನ್ಯಾಯಪೀಠ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ' ಎಂದರು.

ಸುದೀರ್ಘ ವಾದ ಮಂಡನೆಯನ್ನು ಆಲಿಸಿದ ನ್ಯಾಯಾಲಯ ಅಕ್ಟೋಬರ್ 28ರಂದು ಅರ್ಜಿದಾರರ ಅಹವಾಲು ಆಲಿಸಿ, ನವೆಂಬರ್ 2ರಂದು ಅಂತಿಮ ಆದೇಶ ಪ್ರಕಟಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

English summary
The Karnataka high court on Thursday refused to stay Shivananda circle steel flyover project. The State Cabinet approved for the construction of a steel flyover at Race Course Road to Sivananda Circle at a cost of Rs 19.85 core.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X