ಕರವೇಯಿಂದ ಉಚಿತ ಉದ್ಯೋಗ ಮಾರ್ಗದರ್ಶನ ಶಿಬಿರ
ಬೆಂಗಳೂರು, ಜ.5: ಕರ್ನಾಟಕ ರಕ್ಷಣಾ ವೇದಿಕೆಯ "ಐಟಿ ಘಟಕ" ಕನ್ನಡಿಗ ಉದ್ಯೋಗಾರ್ಥಿಗಳ ಅನುಕೂಲಕ್ಕಾಗಿ "ಉದ್ಯೋಗ ಮಾರ್ಗದರ್ಶನ ಶಿಬಿರ"ವನ್ನು ಹಮ್ಮಿಕೊಂಡಿದೆ
ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ನಾಡು ನುಡಿಯ ವಿಚಾರವಾಗಿ ಕಳೆದ 15 ವರ್ಷಗಳಿಂದ ಹೋರಾಟಗಳನ್ನು ಮಾಡಿಕೊಂಡು ಬರುತ್ತಿರುವುದು ನಾಡಿನ ಜನತೆಗೆ ತಿಳಿದಿದೆ. [ಕನ್ನಡಿಗರಿಗೆ ಉದ್ಯೋಗ, ಅದೇ ನಿಜವಾದ ರಾಜ್ಯೋತ್ಸವ]
ಬೆಂಗಳೂರು ಮಹಾನಗರದಲ್ಲಿ ಸುಮಾರು ಎರಡು ದಶಕಗಳ ಹಿಂದೆ ಐಟಿ ಉದ್ಯಮವು ಸ್ಥಾಪನೆಯಾಗಿ ಇಂದು ಹೆಮ್ಮರವಾಗಿ ಬೆಳೆದಿದೆ. ದೇಶದ ವಿವಿಧ ಭಾಗಗಳಿಂದ ಜನರು ಐಟಿ ಉದ್ಯೋಗ ಅರಸಿ ಬೆಂಗಳೂರಿಗೆ ಬರುತ್ತಿದ್ದಾರೆ. [ಕನ್ನಡಿಗರಿಗೆ ಉದ್ಯೋಗ ಸಿಗಲಿ, ಕರವೇ ಮೆರವಣಿಗೆ]
ಈ ಹೊತ್ತಿನಲ್ಲಿ ರಾಜ್ಯದ ನಾನ ಭಾಗಗಳಲ್ಲಿ ವಿದ್ಯಾಭ್ಯಾಸ ಪಡೆದು ತಮ್ಮ ಅಭಿರುಚಿಗೆ ಸರಿಹೊಂದುವ ಐಟಿ ಉದ್ಯೋಗವನ್ನು ಹುಡುಕುತ್ತಿರುವ ಕನ್ನಡಿಗರಿಗೆ "ಉದ್ಯೋಗ ಮಾರ್ಗದರ್ಶನ ಶಿಬಿರ"ದ ಮೂಲಕ ಮಾರ್ಗದರ್ಶನವನ್ನು ನೀಡುವುದು ಕರ್ನಾಟಕ ರಕ್ಷಣಾ ವೇದಿಕೆಯ "ಐಟಿ ಘಟಕ"ದ ಧ್ಯೇಯೋದ್ದೇಶಗಳಲ್ಲಿ ಒಂದಾಗಿದೆ.

ಈ ನಿಟ್ಟಿನಲ್ಲಿ ಜನವರಿ 10, 2015 ರಂದು ಉದ್ಯೋಗ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಿದ್ದೇವೆ. ವಿವರಗಳು ಹೀಗಿವೆ:
ದಿನಾಂಕ: ಜನವರಿ 10, 2015, ಶನಿವಾರ
ಸ್ಥಳ: ವಾಡಿಯಾ ಹಾಲ್, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು
ಸಮಯ: ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ
ನೊಂದಣಿ: ನೊಂದಾಯಿಸಿಕೊಂಡವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರೆಯುತ್ತದೆ. ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಐಟಿ ಘಟಕದ ಧ್ಯೇಯೋದೇಶಗಳು:
1. ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮಾರ್ಗದರ್ಶನ ನೀಡುವುದು.
2. ಉದ್ಯೋಗಾಕಾಂಕ್ಷಿಗಳಿಗೆ ಸಹಕಾರಿಯಾಗುವಂತಹ ಉದ್ಯೋಗ ಮಾಹಿತಿ ಕೇಂದ್ರವನ್ನು ಸ್ಥಾಪಿಸುವುದು
3. ಐಟಿ ಉದ್ಯೋಗ ಅರಸಿ ನಾಡಿಗೆ ಹಲವು ಪರಭಾಷಿಕರು ಬರುತ್ತಿದ್ದಾರೆ. ಅವರನ್ನು ಮುಖ್ಯವಾಹಿನಿಗೆ ತರಲು "ಕನ್ನಡ ಕಲಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. [ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗ: ಗಡುವು ]
ಇದು ಕರ್ನಾಟಕ ರಕ್ಷಣಾ ವೇದಿಕೆಯ ಐಟಿ ಘಟಕವು ಕನ್ನಡಿಗರ ಅನುಕೂಲಕ್ಕೋಸ್ಕರ ಉಚಿತವಾಗಿ ಆಯೋಜಿಸುತ್ತಿರುವ ಶಿಬಿರವಾಗಿದೆ. ನಿಮ್ಮ ಪರಿಚಿತರೊಂದಿಗೆ ಹಂಚಿಕೊಂಡು ಹೆಚ್ಚಿನ ಜನರಿಗೆ ತಲುಪಿಸಬೇಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಐಟಿ ಘಟಕ ಉಪಾದ್ಯಕ್ಷರಾದ ಅಮರನಾಥ್ ಶಿವಶಂಕರ್ ಕೋರಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications