ಅಪಾರ್ಟ್‌ಮೆಂಟ್‌ಗಳಲ್ಲಿ ಸ್ಥಾಪನೆಯಾಗಲಿದೆ ನಂದಿನಿ ಬೂತ್

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 10 : ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್) ತನ್ನ ಉದ್ಯಮವನ್ನು ವಿಸ್ತರಣೆ ಮಾಡಲು ಯೋಜನೆ ರೂಪಿಸಿದೆ. ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ನಂದಿನಿ ಹಾಲಿನ ಬೂತ್‌ಗಳನ್ನು ತೆರೆಯಲು ನಿರ್ಧರಿಸಿದೆ. ಪ್ರಾಯೋಗಿಕವಾಗಿ 100 ಬೂತ್‌ಗಳನ್ನು ತೆರೆಯಲಾಗುತ್ತದೆ.

ಕಳೆದವಾರ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಅಪಾರ್ಟ್‌ಮೆಂಟ್‌ ಸಂಘದವರೊಂದಿಗೆ ಸಭೆ ನಡೆಸಿ, ನಂತರ ನಂದಿನಿ ಬೂತ್‌ಗಳನ್ನು ಸ್ಥಾಪನೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. [ಹಾಲಿನ ದರ 4 ರೂ ಏರಿಕೆ, ಎಲ್ಲಿ ದರ ಎಷ್ಟಿದೆ?]

kmf

ಒಂದು ನಂದಿನಿ ಬೂತ್ ಸ್ಥಾಪನೆಗೆ ಸುಮಾರು 80 ಸಾವಿರ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಅಪಾರ್ಟ್‌ಮೆಂಟ್‌ನಲ್ಲಿ ತರಕಾರಿ ಮಾರುಕಟ್ಟೆ, ಅಂಗಡಿಗಳ ಸ್ಥಾಪನೆಗೆ ಜಾಗವನ್ನು ಮೀಸಲಾಗಿಡಲಾಗಿರುತ್ತದೆ, ಅಲ್ಲಿಯೇ ಬೂತ್ ಸ್ಥಾಪಿಸಲು ಕೆಎಂಎಫ್ ನಿರ್ಧರಿಸಿದೆ. [ಕೆಎಂಎಫ್ ನಂತೆ ಬ್ರಾಂಡೆಡ್ ಮಟನ್ ಸ್ಟಾಲ್ ಸ್ಥಾಪನೆ]

ಅಪಾರ್ಟ್‌ಮೆಂಟ್‌ನಲ್ಲಿರುವ ಸಹಕಾರಿ ಸಂಘದವರೇ ಒಬ್ಬರನ್ನು ನೇಮಿಸಿ ಈ ಬೂತ್‌ಗಳನ್ನು ಮುನ್ನಡೆಸಬೇಕಾಗುತ್ತದೆ. ಬೂತ್‌ಗೆ ಅಗತ್ಯವಿರುವ ಕೂಲರ್‌ಗಳನ್ನು ಖರೀದಿಸಲು ಕೆಎಂಎಫ್ ಸಬ್ಸಿಡಿ ನೀಡಲಿದೆ. ಸದ್ಯ, ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ 100 ಬೂತ್‌ಗಳನ್ನು ಸ್ಥಾಪಿಸಲು ಕೆಎಂಎಫ್ ಚಿಂತನೆ ನಡೆಸಿದೆ.

ನಂದಿನಿ ಬೂತ್‌ಗಳಲ್ಲಿ ಕೆಎಂಎಫ್‌ನ 50ಕ್ಕೂ ಹೆಚ್ಚು ಉತ್ಪನ್ನಗಳು ಲಭ್ಯವಿದೆ. ರಾಜ್ಯಾದ್ಯಂತ ಕೆಎಂಎಫ್ 800ಕ್ಕೂ ಅಧಿಕ ಬೂತ್‌ಗಳನ್ನು ಹೊಂದಿದ್ದು, ಬೆಂಗಳೂರು ನಗರದಲ್ಲಿಯೇ 400ಕ್ಕೂ ಅಧಿಕ ಬೂತ್‌ಗಳಿವೆ. ಎಲ್ಲವೂ ಅಂದುಕೊಂಡಂತೆ ಆದರೆ, ಕೆಲವೇ ದಿನಗಳಲ್ಲಿ ಅಪಾರ್ಟ್‌ಮೆಂಟ್‌ನಲ್ಲಿಯೇ ನಂದಿನಿ ಹಾಲು ಸಿಗಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Milk Federation (KMF) will set up retail units at apartment complexes in Bengaluru city. On the pilot mode KMF proposed to open 100 units.
Please Wait while comments are loading...