ಮುನ್ನೋಟದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಕೆ
ಬೆಂಗಳೂರು, ಜೂನ್ 3: ಮೈಸೂರು ಸಾಮ್ರಾಜ್ಯವನ್ನು 1894 ರಿಂದ 1940ರವರೆಗೂ ಸಮರ್ಥವಾಗಿ ಆಳಿದ, ಜನತೆಯ ಅಚ್ಚುಮೆಚ್ಚಿನ ರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಇಂದಿನ ತಲೆಮಾರಿಗೆ ಎಷ್ಟು ಗೊತ್ತು? ಅವರ ಬಗ್ಗೆ ಒಂದಷ್ಟನ್ನಾದರೂ ತಿಳಿಸುವ ಪ್ರಯತ್ನವಾಗಿ ಅವರ ಜನ್ಮದಿನವಾದ ಜೂನ್ 4 ರಂದು ವಿಭಿನ್ನ ಕಾರ್ಯಕ್ರಮವೊಂದು ನಡೆಯುತ್ತಿದೆ.
ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯ ಸೌತ್ ಅವೆನ್ಯೂ ಕಾಂಪ್ಲೆಕ್ಸ್ ನಲ್ಲಿ ನಾಳೆ (ಜೂನ್ 04) ಬೆಳಿಗ್ಗೆ 11:30 ಕ್ಕೆ ನಡೆಯುವ ಮುನ್ನೋಟ ಕಾರ್ಯಕ್ರಮದಲ್ಲಿ ಯುವ ಬರಹಗಾರ ಸಂದೀಪ್ ಕಂಬಿಯವರು ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಮಾತನಾಡಲಿದ್ದಾರೆ.[ಉತ್ತರ ಕರ್ನಾಟಕ ನವನಿರ್ಮಾಣ ವೇದಿಕೆಯಿಂದ ಬೆಂಗಳೂರಲ್ಲಿ ಅದ್ಧೂರಿ ಕಾರ್ಯಕ್ರಮ]

ಬ್ರಿಟಿಷ್ ಸಾಮ್ರಾಜ್ಯದ ಭಾಗವಾಗಿದ್ದುಕೊಂಡು ತಮಗಿದ್ದ ಅನೇಕ ಅಡೆತಡೆಗಳ ನಡುವೆಯೂ ನಲವತ್ತು ವರ್ಷಗಳ ಕಾಲ ಸುದೀರ್ಘವಾದ ಜನಪರ ಆಡಳಿತ ನಡೆಸಿ, ಕಲಿಕೆ, ಕೈಗಾರಿಕ, ಉದ್ಯಮ, ಸಂಪರ್ಕ, ಕೃಷಿ, ಆರೋಗ್ಯ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ಮೈಸೂರು ಸಾಮ್ರಾಜ್ಯವನ್ನು ಅಭಿವೃದ್ಧಿಗೊಳಿಸಿದ ಕೃಷ್ಣರಾಜ ಒಡೆಯರ್ ಅವರನ್ನು ನೆನಪಿಸಿಕೊಂಡು, ಅವರಿಗೆ ನಮನ ಸಲ್ಲಿಸುವುದಕ್ಕಾಗಿ ಈ ಕಾರ್ಯಕ್ರಮ ನಡೆಯುತ್ತಿದೆ. ಆಸಕ್ತರು ಭಾಗವಹಿಸಲು ಕೋರಲಾಗಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications