ಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಮತ್ತೊಬ್ಬ ಆರೋಪಿ ಬಂಧನ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 20: ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಭಾನುವಾರ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಕೆಎಸ್ ಈಶ್ವರಪ್ಪ ಅವರ ಪಿಎ ವಿನಯ್ ರನ್ನು ಅಪಹರಿಸಲು ಯತ್ನ

ಉಮಾಕಾಂತ್ ಎನ್ನುವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಪ್ರಶಾಂತ್​ನ ಬಂಟ ಉಮಾಕಾಂತ್, ಯಡಿಯೂರಪ್ಪ ಪಿಎ ಸಂತೋಷ ಜತೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಮೇ 11ರಂದು ಮಹಾಲಕ್ಷ್ಮಿ ಲೇ ಔಟ್ ಬಳಿ ತೆರಳುತ್ತಿದ್ದಾಗ ವಿನಯ್ ಅಪಹರಣ ಯತ್ನ ನಡೆದಿತ್ತು

KS Eshwarappa pa kidnap case one more accused arrested

ಉಮಾಕಾಂತ್ ನನ್ನು ಕೋರಮಂಗಲ ಪೊಲೀಸರು ವಿಚಾರಣೆ ನಡೆಸಿದಾಗ ಎರಡು ಬಾರಿ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ಮನೆಯಲ್ಲಿ ಸಂತೋಷ್ ನನ್ನು ಭೇಟಿಯಾಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಹೆಚ್ಚಿನ ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Another key accused in the BJP leader KS Eshwarappa's PA Vinay kidnap attempt case was arrested by the Koramangala police on Sunday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ