ಕೆಎಸ್ಒಯು ಮಾನ್ಯತೆ ರದ್ದು: ಪ್ರಧಾನಿಗೆ ಮುಖ್ಯಮಂತ್ರಿ ಪತ್ರ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 22: ವಿಶ್ವವಿದ್ಯಾಲಯ ಆಯೋಗವು (ಯುಜಿಸಿ) ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) ಮಾನ್ಯತೆಯನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಮಸ್ಯೆ ಪರಿಹರಿಸುವಂತೆ ಕೋರಿದ್ದಾರೆ.

ಯುಜಿಸಿಯ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸು ಭಗ್ನಗೊಂಡಿದ್ದು, ಈ ಬಗ್ಗೆ ತಾವೇ (ಪ್ರಧಾನಿ) ಖುದ್ದಾಗಿ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ, ಯುಜಿಸಿಗೆ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವಂತೆ ಸೂಚಿಸಬೇಕೆಂದು ಅವರು ಮನವಿ ಮಾಡಿದ್ದಾರೆ,

KSOU De-recognition: CM Siddaramaiah writes to PM Modi in intervene

ಕೆಎಸ್ಒಯುನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಬಹುಪಾಲು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಾಗಿದ್ದು, ಯುಜಿಸಿಯ ನಿರ್ಧಾರದಿಂದಾಗಿ, ಈ ವಿದ್ಯಾರ್ಥಿಗಳು ತಮ್ಮ ಜೀವನದ ಮಹತ್ವದ ಘಟ್ಟದಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಪಡೆಯುವ ಅವಕಾಶದಿಂದ ವಂಚಿತರಾಗಿದ್ದಾರೆ. ಈ ಆತಂಕದಿಂದ ಆ ವಿದ್ಯಾರ್ಥಿಗಳನ್ನು ಪಾರು ಮಾಡಬೇಕಿದೆ ಎಂದು ಅವರು ವಿವರಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chief Minister of Karnataka writes a letter to PM Modi to look into the issue of De-recognition of Karnataka State Open University (KSOU) by UGC. He requests him to guide UGC to change its decision with positive verdict about the university.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ