ಯುಗಾದಿ ಪ್ರಯುಕ್ತ ವಿಶೇಷ ಕೆಎಸ್ಆರ್‌ಟಿಸಿ ಬಸ್ಸುಗಳು
ಬೆಂಗಳೂರು, ಮಾ. 20 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾರ್ಚ್ 20 ಮತ್ತು 21 ರಂದು ಯುಗಾದಿ ಪ್ರಯುಕ್ತ ವಿಶೇಷ ಬಸ್ಸುಗಳ ವ್ಯವಸ್ಥೆಯನ್ನು ಮಾಡಿದೆ. ಸಂಚಾರಿ ಪೊಲೀಸರು ಮೆಜೆಸ್ಟಿಕ್ ಸುತ್ತಮುತ್ತ ವಾಹನ ನಿಲುಗಡೆಯಲ್ಲಿಯೂ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ.
ಮಾ.20ರ ಶುಕ್ರವಾರ 866 ಮತ್ತು ಮಾ.21ರ ಶನಿವಾರ 546 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಇವುಗಳು ಬೆಂಗಳೂರಿನ ವಿವಿಧ ಪ್ರದೇಶದಿಂದ ಸಂಚಾರ ನಡೆಸಲಿವೆ. ಸುಗಮ ಸಂಚಾರದ ದೃಷ್ಟಿಯಿಂದ ಶುಕ್ರವಾರ ಮತ್ತು ಶನಿವಾರ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಿ ಸಂಚಾರ ವಿಭಾಗದ ಡಿಸಿಪಿ ಎಸ್.ಗಿರೀಶ್ ಆದೇಶ ಹೊರಡಿಸಿದ್ದಾರೆ. [ಪೀಣ್ಯದ ಬಸವೇಶ್ವರ ನಿಲ್ದಾಣ ಸ್ಥಳಾಂತರ]

ಯಾವ ಬಸ್ಸುಗಳು ಎಲ್ಲಿಂದ ಕಾರ್ಯಾಚರಣೆ : ಮೈಸೂರು, ಕೊಡಗು ಮತ್ತು ಕೇರಳಕ್ಕೆ ತೆರಳುವ ಬಸ್ಸುಗಳು ಮೈಸೂರು ರಸ್ತೆ ನಿಲ್ದಾಣದಿಂದ, ತಮಿಳುನಾಡು ಕಡೆಗೆ ಹೋಗುವ ಬಸ್ಸುಗಳು ಶಾಂತಿನಗರ ನಿಲ್ದಾಣದಿಂದ, ದಾವಣಗೆರೆ ಕಡೆಗೆ ತೆರಳುವ ಬಸ್ಸುಗಳು ಚಿಕ್ಕಲಾಲ್‌ಬಾಗ್ ನಿಲ್ದಾಣದ ಮೂಲಕ ಸಂಚಾರ ಆರಂಭಿಸಲಿವೆ. [487 ಟಾಟಾ ಬಸ್ ಖರೀದಿ ಮಾಡಲಿದೆ ಸಾರಿಗೆ ಇಲಾಖೆ]
ಉಳಿದಂತೆ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ, ಪೀಣ್ಯ, ವಿಜಯನಗರ ಟಿಟಿಎಂಸಿ, ಗಂಗಾನಗರ, ಮಲ್ಲೇಶ್ವರಂ 18ನೇ ಕ್ರಾಸ್ ಮೂಲಕವೂ ಹಲವು ಬಸ್ಸುಗಳು ಸಂಚಾರ ಆರಂಭಿಸಲಿವೆ. ಮುಂಗಡವಾಗಿ ಬುಕ್ಕಿಂಗ್ ಮಾಡದ ಬಸ್ಸುಗಳು ಮೆಜೆಸ್ಟಿಕ್‌ನಿಂದ ಸಂಚಾರ ನಡೆಸಲಿವೆ.
ವಾಹನ ನಿಲುಗಡೆ ನಿಷೇಧ : ಮೆಜೆಸ್ಟಿಕ್‌ಗೆ ಶುಕ್ರವಾರ ಮತ್ತು ಶನಿವಾರ ಹೆಚ್ಚಿನ ಜನರು ಆಗಮಿಸುವುದರಿಂದ ಧನ್ವಂತರಿ ರಸ್ತೆ, ರೈಲು ನಿಲ್ದಾಣ ರಸ್ತೆ, ಟ್ಯಾಂಕ್ ಬಂಡ್ ರಸ್ತೆ, ಪ್ಲಾಟ್‌ಫಾರಂ ರಸ್ತೆ ಮತ್ತು ಖೋಡೇಸ್ ಜಂಕ್ಷನ್‌ನಲ್ಲಿ ಖಾಸಗಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications