ಗೌರಿ-ಗಣೇಶ ಹಬ್ಬ, ಕೆಎಸ್ಆರ್‌ಟಿಸಿಯಿಂದ1000 ಹೆಚ್ಚುವರಿ ಬಸ್

Posted By: Gururaj
Subscribe to Oneindia Kannada

ಬೆಂಗಳೂರು, ಅ.22 : ಗೌರಿ-ಗಣೇಶ ಹಬ್ಬದಪ್ರಯುಕ್ತ ಕೆಎಸ್ಆರ್‌ಟಿಸಿ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ 1000 ಹೆಚ್ಚುವರಿ ಸ್ಸುವ್ಯವಸ್ಥೆಯನ್ನು ಮಾಡಿದೆ. ಆನ್‌ಲೈನ್ ಮೂಲಕವೂ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮಾಡಿ ಸಖತ್ ಮಜಾ, ಆಗಸ್ಟ್ ತಿಂಗಳಲ್ಲಿ 9 ಸರ್ಕಾರಿ ರಜಾ!

ಆಗಸ್ಟ್ 23ರ ಬುಧವಾರದಿಂದ ರಿಂದ 26ರ ತನಕ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಕ್ಕೆ ಕೆಎಸ್ಆರ್‌ಟಿಸಿ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ.

KSRTC to operate 1000 extra buses to meet Gowri-Ganesha festival rush

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಕಡೆ ತೆರಳುವ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡಲಿವೆ.

ಚಿತ್ರದುರ್ಗ : ಕೆಎಸ್ಆರ್‌ಟಿಸಿ ವೈಭವ್ ಬಸ್ ಜಪ್ತಿಗೆ ಆದೇಶ!

ಮೈಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ಸಂಚಾರ ನಡೆಸುವ ಹೆಚ್ಚುವರಿ ಬಸ್ಸುಗಳು ಮೈಸೂರು ರಸ್ತೆ ಬಸ್ (ಸ್ಯಾಟಲೈಟ್) ನಿಲ್ದಾಣದಿಂದ ಸಂಚಾರ ನಡೆಸಲಿವೆ. ಹೊರ ರಾಜ್ಯಗಳಿಗೆ ತೆರಳುವ ಬಸ್ಸುಗಳು ಶಾಂತಿ ನಗರ ಬಸ್ ನಿಲ್ದಾಣದಿಂದ ಸಂಚಾರ ನಡೆಸಲಿವೆ.

ನಾಲ್ಕು ಅಥವ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇ 5ರಷ್ಟು, ಹೋಗುವ ಮತ್ತು ವಾಪಸ್ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದರೆ ಶೇ 10ರಷ್ಟು ರಿಯಾಯಿತಿ ದೊರೆಯಲಿದೆ. ಆನ್ ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಲು ವಿಳಾಸ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
To meet the Gowri-Ganesha festival rush Karnataka State Road Transport Corporation will run 1000 extra buses in addition to the existing schedules between August 23 and 26, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ