ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕ್ರಿಸ್‌ಮಸ್ ರಜೆ : ಕೆಎಸ್ಆರ್‌ಟಿಸಿಯಿಂದ 550 ಹೆಚ್ಚುವರಿ ಬಸ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 19 : ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಕೆಎಸ್ಆರ್‌ಟಿಸಿ 550 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಬಸ್‌ಗಳು ಸಂಚಾರ ನಡೆಸಲಿವೆ.

ಡಿಸೆಂಬರ್ 21 ಮತ್ತು 22ರಂದು ಬೆಂಗಳೂರಿನಿಂದ 90 ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿವೆ. ಬೆಂಗಳೂರು ಮತ್ತು ಬೇರೆ ರಾಜ್ಯಗಳಿಂದ ಡಿಸೆಂಬರ್ 25ರಂದು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಜನವರಿ 8 ಮತ್ತು 9ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರಜನವರಿ 8 ಮತ್ತು 9ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರ

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. www.ksrtc.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೂಲಕವೂ ಟಿಕೆಟ್ ಬುಕ್ ಮಾಡಬಹುದಾಗಿದೆ.

ಬಾಪೂಜಿ ಕೇಂದ್ರದಲ್ಲಿ ಬಸ್, ರೈಲ್ವೇ ಟಿಕೆಟ್ ಬುಕ್ ಮಾಡಿಬಾಪೂಜಿ ಕೇಂದ್ರದಲ್ಲಿ ಬಸ್, ರೈಲ್ವೇ ಟಿಕೆಟ್ ಬುಕ್ ಮಾಡಿ

ನಾಲ್ಕು ಅಥವ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇ 5 ಮತ್ತು ಹೋಗುವ ಮತ್ತು ಬರುವ ಟಿಕೆಟ್‌ ಅನ್ನು ಒಟ್ಟಿಗೆ ಬುಕ್ ಮಾಡಿದರೆ ಶೇ 10ರಷ್ಟು ರಿಯಾಯಿತಿ ದೊರೆಯಲಿದೆ.

ಮೈಸೂರು ಭಾಗದ ಕೆಎಸ್ಆರ್‌ಟಿಸಿ ಬಸ್ ಮೆಜೆಸ್ಟಿಕ್‌ಗೆ ಸ್ಥಳಾಂತರಮೈಸೂರು ಭಾಗದ ಕೆಎಸ್ಆರ್‌ಟಿಸಿ ಬಸ್ ಮೆಜೆಸ್ಟಿಕ್‌ಗೆ ಸ್ಥಳಾಂತರ

ಎಲ್ಲಿಂದ, ಎಲ್ಲಿಗೆ

ಎಲ್ಲಿಂದ, ಎಲ್ಲಿಗೆ

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬೆಳಗಾವಿ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ.

ಮೈಸೂರು ರಸ್ತೆ ನಿಲ್ದಾಣ

ಮೈಸೂರು ರಸ್ತೆ ನಿಲ್ದಾಣ

ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಭಾಗದ ವಿಶೇಷ ಬಸ್‌ ಸಂಚಾರ ನಡೆಸಲಿವೆ.

ಶಾಂತಿನಗರ ಬಸ್ ನಿಲ್ದಾಣದಿಂದ ಆಂಧ್ರಪ್ರದೇಶ, ತೆಲಂಗಾಣ, ಮಧುರೈ, ತಿರುಚ್ಚಿ, ಚೆನ್ನೈ, ತಿರುಪತಿ, ವಿಜಯವಾಡ ಸೇರಿಂದತೆ ಬೇರೆ ರಾಜ್ಯಗಳ ಬಸ್‌ಗಳು ಸಂಚಾರ ನಡೆಸಲಿವೆ.

ಬಸವೇಶ್ವರ ಬಸ್ ನಿಲ್ದಾಣ

ಬಸವೇಶ್ವರ ಬಸ್ ನಿಲ್ದಾಣ

ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ, ಬನಶಂಕರಿ, ಜೀವನ್ ಭೀಮಾ ನಗರ, ಐಟಿಐ ಗೇಟ್, ಗಂಗಾ ನಗರ, ಕೆಂಗೇರಿ ಉಪ ನಗರದಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳಗಳಿಗೆ ವಿಶೇಷ ಬಸ್ ಸಂಚಾರ ನಡೆಸಲಿವೆ.

ಕ್ರಿಸ್ ಮಸ್ ರಜೆ

ಕ್ರಿಸ್ ಮಸ್ ರಜೆ

ಕ್ರಿಸ್‌ ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ಸಾಲು ಸಾಲು ರಜೆ ಸಿಗಲಿದೆ. ಆದ್ದರಿಂದ, ಬೇರೆ ಊರುಗಳಿಗೆ ಜನರು ಪ್ರಯಾಣ ಬೆಳೆಸಲಿದ್ದಾರೆ.

* ಡಿಸೆಂಬರ್ 22 ಶನಿವಾರ
* ಡಿಸೆಂಬರ್ 23 ಭಾನುವಾರ
* ಡಿಸೆಂಬರ್ 25 ಮಂಗಳವಾರ

ಡಿಸೆಂಬರ್ 24 ಸೋಮವಾರ ರಜೆ ಹಾಕಿದರೆ ನಾಲ್ಕು ದಿನಗಳ ರರಜೆ ಸತತವಾಗಿ ಸಿಗಲಿದೆ.

English summary
The Karnataka State Road Transport Corporation (KSRTC) will operate 550 special buses for Christmas leave. Buses will run from Bengaluru on December 21 and 22, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X