ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು ರಾತ್ರಿ ಎಂದಿನಂತೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ

|
Google Oneindia Kannada News

ಬೆಂಗಳೂರು, ಜನವರಿ 8: ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ರಾತ್ರಿ ಸಂಚಾರ ಆರಂಭಿಸಲಿವೆ ಎಂದು ಕೆಎಸ್‌ಆರ್‌ಟಿಸಿ ನಿಗಮ ತಿಳಿಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ?ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ?

ಆದರೆ ಪ್ರಯಾಣಿಕರ ಹಿತದೃಷ್ಟಿಯಿಂದ ಮಂಗಳವಾರ ರಾತ್ರಿ ಎಂದಿನಂತೆಯೇ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮಾಡಲಿದೆ. ಕೇವಲ ಒಂದೇ ದಿನದ ಮುಷ್ಕರವಾಗಿದ್ದರೆ ಮುಷ್ಕರದ ದಿನ ಆರು ಗಂಟೆ ಬಳಿಕ ಬಸ್‌ಗಳ ಸಂಚಾರ ಆರಂಭವಾಗುತ್ತಿತ್ತು, ಆದರೆ ಎರಡು ದಿನಳ ಮಯಷ್ಕರವಾದ್ದರಿಂದ ಜನರಿಗೆ ಆತಂಕವಿತ್ತು. ಆದರೆ ಅದೀಗ ದೂರವಾಗಿದೆ.

KSRTC will resume service by night

ಮೆಜೆಸ್ಟಿಕ್ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ತೆಳಲು ಕೆಎಸ್‌ಆರ್‌ಟಿಸಿ ಬಸ್‌ ಸಿದ್ಧಗೊಳ್ಳುತ್ತಿದೆ, ಆದರೆ ಇದುವರೆಗೂ ಒಂದೇ ಒಂದು ಪ್ರುಯಾಣಿಕ ಕೂಡ ಸೀಟು ಬುಕ್ ಮಾಡಿಲ್ಲ.

ಕರಾವಳಿ ಭಾಗದಲ್ಲಿ ಭಾರತ್ ಬಂದ್ ಗೆ ಪ್ರತಿಕ್ರಿಯೆ ಹೇಗಿದೆ? ಕರಾವಳಿ ಭಾಗದಲ್ಲಿ ಭಾರತ್ ಬಂದ್ ಗೆ ಪ್ರತಿಕ್ರಿಯೆ ಹೇಗಿದೆ?

ಆದರೆ ಎರಡು ದಿನಗಳ ಕಾಲ ಸಂಪೂರ್ಣವಾಗಿ ಬಿಎಂಟಿಸಿ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬುಧವಾರ ಪ್ರತಿಭಟನೆ ಇನ್ನೂ ತೀವ್ರವಾಗುವ ಸಾಧ್ಯತೆ ಇದೆ. ಮೆಟ್ರೋ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
KSRTC stated that they will resume services by night after Bharath Bandh, Actually bandh was called for two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X