ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2017ರಲ್ಲೇ ಕರ್ನಾಟಕದಲ್ಲಿ ಚುನಾವಣೆ -ಕುಮಾರಸ್ವಾಮಿ ಭವಿಷ್ಯ

2017ರ ಅಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆ ಜತೆಗೆ ಕರ್ನಾಟಕದ್ದೂ ನಡೆಯಲಿದೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

By Sachhidananda Acharya
|
Google Oneindia Kannada News

ಬೆಂಗಳೂರು, ಫೆಬ್ರವರಿ 2: ಎಸ್.ಎಂ ಕೃಷ್ಣ ರಾಜೀನಾಮೆ ಬೆನ್ನಿಗೆ ಕಾಂಗ್ರೆಸ್ ಪಕ್ಷದಲ್ಲಿ ಮಿಂಚಿನ ಬೆಳವಣಿಗೆಗಳು ನಡೆಯುತ್ತಿವೆ. ಇದೇ ವೇಳೆ ಕರ್ನಾಟಕದಲ್ಲಿ 2017ರಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ ಅಂತ ಜೆ.ಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದು ಕುತೂಹಲ ಕೆರಳಿಸಿದೆ.

ಕರ್ನಾಟಕದಲ್ಲಿ 2017ರಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ ಅಂತ ಅವರು ಗುರುವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. "ನಾನೇನು ಭವಿಷ್ಯ ನುಡಿಯುತ್ತಿಲ್ಲ ಆದರೆ ಸದ್ಯದ ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳನ್ನು ನೋಡಿದರೆ ಹಾಗೆ ಅನ್ನಿಸುತ್ತಿದೆ," ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.[ಮೈಸೂರು: ಆದಿವಾಸಿಗಳಿಗೆ ಆಹಾರದ ಕಿಟ್ ವಿತರಿಸಿದ ಸಿದ್ದರಾಮಯ್ಯ]

Kumaraswamy Predicts, Karnataka Assembly Election in 2017

ಕರ್ನಾಟಕ ಮತ್ತು ಗುಜರಾತ್ ವಿಧಾನಸಭೆಗೆ ಒಟ್ಟಾಗಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. 2017ರ ಅಂತ್ಯದಲ್ಲಿ ಗುಜರಾತ್ ವಿಧಾನ ಸಭೆಗೆ ಚುನಾವಣೆ ನಡೆಯಲಿದೆ.[ಕೇಂದ್ರ ಬಜೆಟ್ ಬಗ್ಗೆ ಖಾದರ್, ರಮಾನಾಥ ರೈ ಹೇಳಿದ್ದೇನು?]

ನಿಗದಿಯಂತೆ ಕರ್ನಾಟಕ ವಿಧಾನಸಭೆಗೆ 2018ರ ಆರಂಭದಲ್ಲಿ ಚುನಾವಣೆ ನಡೆಯಬೇಕು. ಆದರೆ ಅದಕ್ಕೂ ಮೊದಲೇ ಚುನಾವಣೆ ನಡೆಯಲಿದೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ.

English summary
JDS State President H D Kumaraswami predicts that Karnataka state assembly election may happen in 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X