ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಡ್ ಶೆಡ್ಡಿಂಗ್ ಅನಿವಾರ್ಯ : ಡಿ.ಕೆ.ಶಿವಕುಮಾರ್

|
Google Oneindia Kannada News

ಬೆಂಗಳೂರು, ನವೆಂಬರ್ 19 : 'ಕಲ್ಲಿದ್ದಲು ಕೊರತೆ ತೀವ್ರವಾಗಿದೆ. ಹೀಗೆ ಮುಂದುವರೆದರೆ ರಾಜ್ಯದಲ್ಲಿ ನಿಯಮಿತ ಲೋಡ್ ಶೆಡ್ಡಿಂಗ್ ಅನಿವಾರ್ಯ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಶನಿವಾರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಕಲ್ಲಿದ್ದಲು ಕೊರತೆಯಿಂದ ಉಂಟಾಗಿರುವ ಪರಿಣಾಮಗಳ ಬಗ್ಗೆ ವಿವರಣೆ ನೀಡಿದರು.

ಅನಿಯಮಿತ ಲೋಡ್‌ ಶೆಡ್ಡಿಂಗ್‌ಗೆ ಸಿಕ್ತು ಪರಿಹಾರ!ಅನಿಯಮಿತ ಲೋಡ್‌ ಶೆಡ್ಡಿಂಗ್‌ಗೆ ಸಿಕ್ತು ಪರಿಹಾರ!

dk shivakumar

ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, 'ಕಲ್ಲಿದ್ದಲು ಸಂಗ್ರಹ ಸಂಪೂರ್ಣವಾಗಿ ಖಾಲಿಯಾಗಿದೆ. ಶಾಖೋತ್ಪನ್ನ ಕೇಂದ್ರಗಳಿಗೆ ಅಂದಿನ ವಿದ್ಯುತ್ ಪೂರೈಕೆಗೆ ಎಷ್ಟು ಅಗತ್ಯವಿದೆಯೋ ಅಷ್ಟು ಮಾತ್ರ ಕಲ್ಲಿದ್ದಲು ಪೂರೈಕೆಯಾಗುತ್ತಿದೆ' ಎಂದರು.

ವಿದ್ಯುತ್ ಇಲಾಖೆಯ ಲೈನ್‌ಮನ್ ಇನ್ನು ಮುಂದೆ 'ಪವರ್‌ಮನ್'ವಿದ್ಯುತ್ ಇಲಾಖೆಯ ಲೈನ್‌ಮನ್ ಇನ್ನು ಮುಂದೆ 'ಪವರ್‌ಮನ್'

'ಕಲ್ಲಿದ್ದಲು ಪೂರೈಕೆಯಲ್ಲಿ ಒಂದು ದಿನ ವ್ಯತ್ಯಾಸವಾದರೂ ಲೋಡ್ ಶೆಡ್ಡಿಂಗ್ ಅನಿವಾರ್ಯ. ಪರಿಸ್ಥಿತಿ ಹೀಗೆ ಮುಂದುವರೆದರೆ ನಿಯಮಿತ ಲೋಡ್ ಶೆಡ್ಡಿಂಗ್ ಅನಿವಾರ್ಯ' ಎಂದು ಸಚಿವರು ಹೇಳಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 500 ಮೆಗಾವಾಟ್ ವಿದ್ಯುತ್ ಖರೀದಿ ಮಾಡಲು ಟೆಂಡರ್ ಕರೆದಿದೆ. ಜೆಎಸ್‌ಡಬ್ಲ್ಯೂ ಎನರ್ಜಿ (200), ಗ್ಲೋಬಲ್ ಎನರ್ಜಿ ಪ್ರೈ.ಲಿ. (300) ಮೆಗಾವಾಟ್ ವಿದ್ಯುತ್ ಒದಗಿಸಲಿವೆ.

ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಗೆ ಕಲ್ಲಿದ್ದಲು ಕೊರತೆಯೇ ಕಾರಣವಾಗಿದೆ. ಕೆಪಿಟಿಸಿಎಲ್ ಕಲ್ಲಿದ್ದಲು ಖರೀದಿಗೆ ಜಾಗತಿಕ ಟೆಂಡರ್ ಕರೆದಿದೆ.

English summary
Load shedding will continue for a few more days due to coal shortage said Karnataka energy minister D.K.Shiva Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X