ಕೆಎಎಎಸ್ ಅಧಿಕಾರ ಬಸವರಾಜೇಂದ್ರಗೆ ಜಾಮೀನು

Posted By: Gururaj
Subscribe to Oneindia Kannada

ಬೆಂಗಳೂರು, ಆಗಸ್ಟ್. 23 : ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಆರೋಪಿಯಾಗಿರುವ ಬಸವರಾಜೇಂದ್ರಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ಅವರನ್ನು ಆ.28ರ ತನಕ ಬಂಧಿಸುವಂತಿಲ್ಲ ಎಂದು ಹೈಕೋರ್ಟ್ ಎಸಿಬಿಗೆ ಆದೇಶ ನೀಡಿದೆ.

ಲೋಕಾಯುಕ್ತ ವಿಶೇಷ ನ್ಯಾಯಾಲಯ ಕೆಎಎಸ್ ಅಧಿಕಾರಿ ಎಚ್.ಬಸವರಾಜೇಂದ್ರ ಅವರಿಗೆ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ಬಸವರಾಜೇಂದ್ರ ನಾಲ್ಕನೇ ಆರೋಪಿಯಾಗಿದ್ದಾರೆ.

ಎಸಿಬಿ ಎಫ್‌ಐಆರ್ : ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

lokayukta

ಡಾ.ಡಿ.ಅಯ್ಯಪ್ಪ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಜೂನ್‌ನಲ್ಲಿ ನೀಡಿದ್ದ ದೂರಿನ ಅನ್ವಯ ಎರಡು ಎಫ್‌ಐಆರ್ ದಾಖಲಾಗಿದೆ. ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಂಟು ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳು.

ತಮ್ಮ ವಿರುದ್ಧದ ಎಸಿಬಿ ಎಫ್‌ಐಆರ್ ರದ್ದುಮಾಡಬೇಕು ಎಂದು ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಕೋರ್ಟ್ ಆ.28ರ ಯಡಿಯೂರಪ್ಪ ಬಂಧಿಸಬಾರದು ಎಂದು ಆದೇಶ ನೀಡಿದ್ದು, ವಿಚಾರಣೆಯನ್ನು ಮುಂದೂಡಿದೆ.

ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್‌ಐಆರ್, ಏನಿದು ಪ್ರಕರಣ?

ಏನಿದು ಪ್ರಕರಣ? : ಬೆಂಗಳೂರಿನಲ್ಲಿ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಹೊರಡಿಸಲಾಗಿದ್ದ ಅಧಿಸೂಚನೆಯನ್ನು ನಿಯಮ ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂಬುದು ಆರೋಪ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Lokayukta special court granted anticipatory bail to KAS officer H.Basavarajendra who has 4th accused in land de-notification case. Anti Corruption Bureau (ACB) registered FIR against him.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ