ಮೇಯರ್ ವಿದೇಶ ಪ್ರವಾಸಕ್ಕೆ ಲೋಕಸತ್ತಾ ವಿರೋಧ
ಬೆಂಗಳೂರು, ಜೂ. 12 : ಕಸದ ಸಮಸ್ಯೆ ನಿವಾರಣೆ ಬಗ್ಗೆ ಅಧ್ಯಯನ ನಡೆಸಲು ದುಬೈ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಕಟ್ಟೆ ಸತ್ಯನಾರಾಯಣ ಅವರ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ಮೇಯರ್ ತಮ್ಮ ಉದ್ದೇಶಿತ ಪ್ರವಾಸವನ್ನು ಕೈಬಿಡಬೇಕು ಎಂದು ಲೋಕಸತ್ತಾ ಪಕ್ಷ ಆಗ್ರಹಿಸಿದೆ.
ಮೇಯರ್ ಪ್ರವಾಸಕ್ಕೆ ವಿರೋಧ ವ್ಯಕ್ತಪಡಿಸಿರುವ ಲೋಕಸತ್ತಾ ಪಕ್ಷ, ಮೇಯರ್ ಅವರ ಉದ್ದೇಶಿತ ದುಬೈ ಪ್ರವಾಸ ಈ ಹಿಂದಿನ ವಿದೇಶಿ ಪ್ರವಾಸಗಳಂತೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಅನವಶ್ಯಕ ಖರ್ಚು ಮತ್ತು ಕಾಲಹರಣಕ್ಕೆ ಕಾರಣವಾಗುತ್ತದೆ ಎಂದು ಪಕ್ಷ ಆರೋಪಿಸಿದೆ. [ಕಸದ ಸಮಸ್ಯೆಗೆ ದುಬೈ, ಸ್ಯಾನ್ ಫ್ರಾನ್ಸಿಸ್ಕೋ ನೆರವು]

ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರ್ಥಿಕ ಸಂಕಷ್ಟದಲ್ಲಿದೆ ಮತ್ತು ಇದರಿಂದ ಪಾರಾಗಲು ಸಾರ್ವಜನಿಕ ಕಟ್ಟಡಗಳನ್ನು ಆಡವಿಟ್ಟಿರುವುದು ಮೇಯರ್ ಅವರಿಗೆ ಸಹ ತಿಳಿದಿದೆ. ಆದರೂ ಸಹ ವಿದೇಶ ಪ್ರವಾಸ ಕೈಗೊಂಡು ದುಂದುವೆಚ್ಚ ಮಾಡಲು ಹೊರಟಿರುವುದು ಖಂಡನೀಯ. ಆದ್ದರಿಂದ ಲೋಕಸತ್ತಾ ಪಕ್ಷವು ಈ ವಿದೇಶಿ ಪ್ರವಾಸವನ್ನು ಈ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ. [ಕಸ ಗಲಾಟೆ: ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ]
ಹಿಂದಿನ ಪ್ರವಾಸಗಳ ಕಥೆ ಏನು : ಬಿಬಿಎಂಪಿ ಮೇಯರ್ ಗಳು ಹಿಂದೆಯೂ ವಿದೇಶ ಪ್ರವಾಸ ಕೈಗೊಂಡು ಅನೇಕ ತಂತ್ರಜ್ಞಾನಗಳ ಬಗ್ಗೆ ಅಧ್ಯಯನ ನಡೆಸಿದ್ದರು. ಸದ್ಯ ಮೇಯರ್ ಪ್ರವಾಸ ಕೈಗೊಳ್ಳುವ ಮೊದಲು ಈ ಹಿಂದಿನ ಪ್ರವಾಸಗಳಿಂದ ಆಗಿರುವ ಪ್ರಯೋಜನಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಪಕ್ಷ ಆಗ್ರಹಿಸಿದೆ. [ಸಚಿವರ ಮನೆ ಸುತ್ತ ಕಸ ಎತ್ತಿ ಲೋಕಸತ್ತಾ ಪ್ರತಿಭಟನೆ]
ಮೇಯರ್ ಕೈಗೊಳ್ಳಲು ಉದ್ದೇಶಿಸಿರುವ ಪ್ರವಾಸ ಮತ್ತೊಂದು ಮೋಜು ಮಸ್ತಿಯ ಪ್ರವಾಸವಾಗಲಿದೆಯೆ ಹೊರತು ಮಂಡೂರಿನ ಅಥವಾ ಬೆಂಗಳೂರಿನ ಜನರಿಗೆ ಇದರಿಂದ ಯಾವುದೇ ಪ್ರಯೋಜನವೂ ಆಗುವುದಿಲ್ಲ. ಬೆಂಗಳೂರಿನಲ್ಲಿಯೇ ಅನೇಕರು ತಮ್ಮ ಸ್ವಂತ ಶ್ರಮದಿಂದ ತಮ್ಮ ತಮ್ಮ ಪ್ರದೇಶಗಳಲ್ಲಿ ಪರಿಸರಸ್ನೇಹಿ ಮತ್ತು ಕಡಿಮೆ ಖರ್ಚಿನ ಅನೇಕ ವಿಧಾನಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಇವುಗಳ ಬಗ್ಗೆ ಮೊದಲು ಅಧ್ಯಯನ ನಡೆಸಲಿ ಎಂದು ಪಕ್ಷ ಸಲಹೆ ನೀಡಿದೆ.
ಮಹಾಪೌರರು ಮತ್ತು ಪಾಲಿಕೆಯ ಅಧಿಕಾರಿಗಳು ಆಸಕ್ತಿ ತೋರಿಸಿದರೆ, ಬೆಂಗಳೂರಿನಲ್ಲೇ ಇರುವ ಅನೇಕ ಯಶಸ್ವಿ ಕಸ ವಿಲೇವಾರಿ ಪದ್ಧತಿಗಳನ್ನು ಲೋಕಸತ್ತಾ ಪಕ್ಷದ ವತಿಯಿಂದ ಅವರಿಗೆ ತೋರಿಸಲಾಗುವುದು, ಅದು ಪಾಲಿಕೆಗೆ ಯಾವುದೇ ಹೊರೆಯಾಗದ ರೀತಿಯಲ್ಲಿ ಮತ್ತು ಅದನ್ನು ಕಾರ್ಯರೂಪಕ್ಕೆ ತರಲು ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದು ಪಕ್ಷ ಭರವಸೆ ನೀಡಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications