ಮಹದಾಯಿ, ಕಾವೇರಿ ಇತ್ಯರ್ಥಕ್ಕೆ ಆ.14ರಂದು ಸರ್ವಪಕ್ಷ ಸಭೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 08 : ಮಹದಾಯಿ ಹಾಗೂ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ನಡೆಸಲು ನಿರ್ಧರಿಸಿದ್ದಾರೆ.

ಮಹಾದಾಯಿ: ರಾಜ್ಯದ ಮನವಿ ತಿರಸ್ಕರಿಸಿದ ಗೋವಾ ಸರ್ಕಾರ

ಮಹದಾಯಿ ಹಾಗೂ ಕಾವೇರಿ ನದಿ ನೀರು ಹಂಚಿಕೆ ಇತ್ಯಾರ್ಥ ಕುರಿತು ಚರ್ಚಿಸಲು ಆಗಸ್ಟ್‌ 14ರಂದು ಸರ್ವ ಪಕ್ಷ ಸಭೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸೋಮವಾರ ಕಾನೂನು ಸಚಿವ ಟಿ.ಬಿ ಜಯಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Mahadayi and carvery dispute Karnataka Government calls all party meet on Aug 14th

ಮಹಾದಾಯಿ ನದಿ ವಿವಾದವನ್ನು ಪರಸ್ಪರ ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಗೋವಾ ಸರ್ಕಾರ ತಿರಸ್ಕರಿಸಿದ ಹಿನ್ನಲೆಯಲ್ಲಿ ಮುಂದಿನ ತೀರ್ಮಾನದ ಬಗ್ಗೆ ಚರ್ಚೆ ನಡೆಯಲಿದೆ.

B S Yeddyurappa has been warned by Mahadayi fighters

ಮತ್ತೊಂದೆಡೆ ಕಾವೇರಿ ಕೊಳ್ಳದ ರೈತರು ಬೆಳೆಗಳಿಗೆ ನೀರು ಬಿಡುವಂತೆ ಪ್ರತಿಭಟನೆ ನಡೆಸುತ್ತಿರುವುದರಿಂದ ಅಗತ್ಯವಿದ್ದಷ್ಟು ನೀರಿನ ಸಂಗ್ರಹವಾಗದ ಹಿನ್ನೆಲೆಯಲ್ಲಿ ಸರ್ಕಾರ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವ ಬದಲು ಸರ್ವ ಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಲು ನಿರ್ಧರಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka Government has convened an all-party meeting on August 14th about Mahadayi and cauvery water dispute, said Karnataka Law Minister TB Jayachandra on Monday.
Please Wait while comments are loading...