ಮಹದಾಯಿ ಕಿಚ್ಚು:400ಕ್ಕೂ ಅಧಿಕ ಜನರಿಂದ ಬಿಜೆಪಿ ಕಚೇರಿ ಮುಂದೆ ಧರಣಿ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 23: ಮಹದಾಯಿ ವಿವಾದಕ್ಕೆ ಪರಿಹಾರ ಒದಗಿಸುವುದಾಗಿ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮಾತು ತಪ್ಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ 400ಕ್ಕೂ ಅಧಿಕ ಜನರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಮುಂದೆ ಧರಣಿ ಕುಳಿತ್ತಿದ್ದಾರೆ.

ನೀರಿನ ಚಿಂತೆ ಬಿಟ್ಟುಬಿಡಿ, ನಾ ತಂದೆ ತರುವೆ : ಯಡಿಯೂರಪ್ಪ ಘೋಷಣೆ

ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮಹಿಳೆಯರು ಮತ್ತು ಪುರುಷರು ಒಳಗೊಂಡ 400ಕ್ಕೂ ಅಧಿಕ ಹೋರಾಟಗಾರರು ಬೆಳಿಗ್ಗೆಯಿಂದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Mahadayi issue: More than 400 farmers have gathered outside the BJP headquarters in Malleshwaram

ಗೋವಾ ಸಿ.ಎಂ. ಮನೋಹರ್ ಪರಿಕ್ಕರ್ ಅವರು, ಕುಡಿಯುವ ನೀರಿಗೆ ಆದ್ಯತೆ ನೀಡಿ ಚರ್ಚೆಗೆ ಸಿದ್ಧವಿರುವುದಾಗಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೋರಾಟಗಾರರು ಯಡಿಯೂರಪ್ಪನವರಿಗೆ ಮನವಿ ಸಲ್ಲಿಸುವವರಿಗೆ ಇಲ್ಲಿಂದ ಹೋಗುವುದಿಲ್ಲ ಎನ್ನುವುದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಎಸಿಪಿ ಬಡಿಗೇರ್ ನೇತೃತ್ವದಲ್ಲಿ ಬಿಜೆಪಿ ಕಚೇರಿ ಮುಂದೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಆದರೆ, ಯಡಿಯೂರಪ್ಪ ಅವರು ಉತ್ತರ ಕನ್ನಡ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿದ್ದಾರೆ. ರೈತರ ಹೋರಾಟಕ್ಕೆ ಸ್ಪಂದಿಸಿ ಅಲ್ಲಿಂದ ಬಂದು ಹೋರಾಟಗಾರರ ಮನವಿ ಸ್ವೀಕರಿಸುತ್ತಾರಾ ಎನ್ನುವುದು ಕಾದು ನೋಡಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
More than 400 farmers have gathered outside the BJP headquarters in Malleshwaram, bengaluru for demanding the implementation of the Kalasa Banduri project.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ