ಬರ ಪೀಡಿತ ಉತ್ತರ ಕರ್ನಾಟಕಕ್ಕೆ ನೀರು ಬಿಡಲು ಒಪ್ಪಿದ ಮಹಾರಾಷ್ಟ್ರ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಮೇ 20: ಬರಪೀಡಿತ ಜಿಲ್ಲೆಗಳಾದ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಗಳಿಗೆ 3 ಟಿಎಂಸಿ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಿದೆ.

ಮಹಾರಾಷ್ಟ್ರದ ಕೋಯ್ನಾ ಅಣೆಕಟ್ಟಿನಿಂದ ನೀರು ಬಿಡಲು ಮಹಾರಾಷ್ಟ್ರ ಒಪ್ಪಿಗೆ ಸೂಚಿಸಿದ್ದು, ಉತ್ತರ ಕರ್ನಾಟಕ ಭಾಗದ ನೀರಿನ ಸಮಸ್ಯೆ ಕೊಂಚ ತಣ್ಣಗಾಗಲಿದೆ ಎಂದು ರಾಜ್ಯ ಜಲ ಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

Maharashtra agrees to release 3 TMC water to Karnataka

ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ತೀವ್ರ ಬರಗಾಲ ತಲೆದೋರಿದ್ದು, ನೀರಿಲ್ಲದೆ ಜನ-ಜಾನುವಾರು ಪರಿತಪಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಈ ಮೊದಲೇ ಕರ್ನಾಟಕ ಮಹಾರಾಷ್ಟ್ರದ ಬಳಿ 4 ಟಿಎಂಸಿ ನೀರು ಬಿಡಲು ಮನವಿ ಮಾಡಿತ್ತು.

ನೆರೆ ರಾಜ್ಯದ ಸಂಕಷ್ಟವನ್ನು ಅರ್ಥ ಮಾಡಿಕೊಂಡಿರುವ ಮಹಾರಾಷ್ಟ್ರ ಸರ್ಕಾರ ನೀರು ಬಿಡಲು ಒಪ್ಪಿರುವುದು ಉತ್ತರ ಕರ್ನಾಟಕದ ಜನರಿಗೆ ಕೊಂಚ ನಿರಾಳತೆಯನ್ನುಂಟು ಮಾಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Maharasthra government has agreed to release 3 TMC water to drought affected north Karnataka districs like Vijayapur, Bagalkot, Belagavi from Koyna dam, Maharashtra.
Please Wait while comments are loading...