ಎಲ್ಲ ಜಿಲ್ಲಾ, ತಾಲ್ಲೂಕುಗಳಲ್ಲಿ ವಾಲ್ಮೀಕಿ ಜಯಂತಿ

Posted By: Prithviraj
Subscribe to Oneindia Kannada

ಬೆಂಗಳೂರು, ಅಕ್ಟೋಬರ್, 13: ಇದೇ ಶನಿವಾರ (ಅ.15)ದಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿಭಾವದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಧಾನಸೌಧಧ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ 15ಕ್ಕೆ ವಾಲ್ಮೀಕಿ ಜಯಂತಿ

ರಾಜ್ಯದ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಯಂತಿ ಆಚರಿಸಲಾಗುವುದು ಎಂದು ತಿಳಿಸಲಾಗಿದೆ, ಈ ಕುರಿತು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಜಯಂತಿ ಆಚರಿಸುವ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಶಾಲಾ-ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ. 2012ರಲ್ಲಿ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರೆಣೆಗೆ ನಿರ್ಧರಿಸಲಾಗಿತ್ತು ಮತ್ತು ಅದರಂತೆ ಅಂದಿನಿಂದ ಜಯಂತಿ ಆಚರಣೆಯನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The state government will celebrate Maharshi Valmiki Jayanthi on this Octobor 15. According to an official release issued recently.
Please Wait while comments are loading...