ಮಲ್ಲಿಕಾರ್ಜುನ ಖರ್ಗೆಯವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

Subscribe to Oneindia Kannada

ಬೆಂಗಳೂರು, ಆಗಸ್ಟ್ 20: ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ 2017 ನೇ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಧಾನಸೌಧದಲ್ಲಿ ನಡೆದ ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಕಾಂಗ್ರೆಸ್ ಹಿರಿಯ ನಾಯಕ ಖರ್ಗೆಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Mallikarjun Kharge awarded with Devaraja Arasu Laureate

ಪ್ರಶಸ್ತಿಯು 2ಲಕ್ಷ ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರತೀ ವರ್ಷ ಡಿ. ದೇವರಾಜ ಅರಸು ಅವರ ಸಾಧನೆ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಂಡವರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದೆ. ಈ ಸಾಲಿನ ಪ್ರಶಸ್ತಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಂದಿದೆ.

ಇದಕ್ಕೂ ಮೊದಲು ದೇವರಾಜ ಅರಸು ಅವರ 102ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಉದ್ಘಾಟಿಸಿ ಅರಸು ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Devaraj Arasu award was presented to Lok Sabha opposition leader Mallikarjun Kharge. Devaraja Arusu award was resented on his 102th birth anniversary program held at Vidhan Soudha.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ