ಪೊಲೀಸ್ ಟಾರ್ಚರ್ ಗೆ ಬೆಂಗಳೂರಿನಲ್ಲಿ ಯುವಕ ಬಲಿ?

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 20 : ಪೊಲೀಸರ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಭಾರತೀ ನಗರದಲ್ಲಿ ನಡೆದಿದೆ.

ಕಾರ್ತಿಕ್​ ಆತ್ಮಹತ್ಯೆ ಮಾಡಿಕೊಂಡ ಯುವಕ. ಭಾರತೀನಗರ ಪೊಲೀಸರು ನೀಡಿದ ಕಿರುಕುಳದಿಂದ ಕಾರ್ತಿಕ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಾರ್ತಿಕ್​ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಚಿಕಿತ್ಸೆ ಫಲಕಾರಿಯಾಗದೆ ಆತ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.

Man commits suicide By Consuming Poison in Bengaluru

ಮೆಕಾನಿಕ್​ ಕೆಲಸ ಮಾಡುತ್ತಿದ್ದ ಕಾರ್ತಿಕ್​ 2 ವರ್ಷಗಳ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದ. ಪೊಲೀಸರು ಕಾರ್ತಿಕ್​ನನ್ನು ವಿಚಾರಣೆಗೆ ಕರೆದೊಯ್ಯಲು ಆತನ ಕುಟುಂಬಸ್ಥರಿಗೆ ಕಿರುಕುಳ ನೀಡುತ್ತಿದ್ದರು.

ಕಾರ್ತಿಕ್​ನ ಅಕ್ಕ ಮತ್ತು ಪತ್ನಿಯನ್ನು ಪೊಲೀಸರು ಠಾಣೆಗೆ ಕರೆದೊಯ್ದು ಕಿರುಕುಳ ನೀಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Man commits suicide By Consuming Poison alleged police torture in Bharthinagar, Bengaluru on August 20th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X