ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಲಿಂಡರ್ ಸ್ಫೋಟ, ಕಟ್ಟಡ ಕುಸಿತ, 7 ಮಂದಿ ದುರ್ಮರಣ

By Mahesh
|
Google Oneindia Kannada News

ಬೆಂಗಳೂರು, ಅಕ್ಟೋಬರ್ 16: ಈಜಿಪುರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಕ್ಕೆ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೇರಿದೆ. ಘಟನಾ ಸ್ಥಳಕ್ಕೆ ಇದೀಗ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಪವಾಡ ಸದೃಶವಾಗಿ ಪಾರಾದ ಬಾಲಕಿಗೆ ಸರ್ಕಾರವೇ ಅಪ್ಪ ಅಮ್ಮಪವಾಡ ಸದೃಶವಾಗಿ ಪಾರಾದ ಬಾಲಕಿಗೆ ಸರ್ಕಾರವೇ ಅಪ್ಪ ಅಮ್ಮ

ರಾಮಲಿಂಗಾ ರೆಡ್ಡಿ ಹೇಳಿಕೆ: ಇದು ಗುಣೇಶ್ ಎಂಬುವವರಿಗೆ ಸೇರಿರುವ ಕಟ್ಟಡ. ತೀರಾ ಹಳೆ ಕಟ್ಟಡವೇನಲ್ಲ, 20 ವರ್ಷ ಹಳೆಯದಿರಬಹುದು. ಮಳೆ ಹಾನಿಯಿಂದ ಕಟ್ಟಡ ಕುಸಿದಿಲ್ಲ. ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದಿರುವ ಸಾಧ್ಯತೆಯಿದೆ. ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ 6 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸೈಂಟ್ ಜಾನ್ಸ್ ಹಾಗೂ ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬದವರಿಗೆ ಸರ್ಕಾರದ ವತಿಯಿಂದ ಪರಿಹಾರ ಧನ ಸಿಗಲಿದೆ.

Three killed, six injured in cylinder blast at Ejipura

* ಮೃತರನ್ನು ಕಲಾವತಿ (38), ರವಿಚಂದ್ರನ್ ಎಂದು ಗುರುತಿಸಲಾಗಿದೆ. ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಅಗ್ನಿಶಾಮಕದಳದ 3 ಸಿಬ್ಬಂದಿಗಳ ಮೇಲೆ ಮನೆಯ ಗೋಡೆ ಕುಸಿದಿದ್ದು, ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಏನು ಕಾರಣ ಎಂಬುದು ಇನ್ನೂ ಪತ್ತೆಯಾಗಿಲ್ಲ.

One killed, six injured in cylinder blast at Ejipura

* ಮೂರು ಅಂತಸ್ತಿನ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮನೆಯಲ್ಲಿದ್ದ ಉಳಿದ 6 ಜನರನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ.

* ಕಟ್ಟಡದ ಅವಶೇಷಗಳಡಿಯಲ್ಲಿ ಇನ್ನೂ ಅನೇಕ ಮಂದಿ ಸಿಲುಕಿರುವ ಸಾಧ್ಯತೆಗಳಿವೆ.

Three killed, six injured in cylinder blast at Ejipura

* ಈಜಿಪುರದ ಚರ್ಚ್ ರಸ್ತೆಯ 7ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಡೆದ ಸ್ಫೋಟದ ಪರಿಣಾಮ ಅಕ್ಕಪಕ್ಕದ ಕಟ್ಟಡಗಳು ಕುಸಿತವಾಗಿದೆ.

* ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

English summary
Three died and six seriously injured in a gas cylinder explosion at a three floor building under Ejipura police limits on Monday(Oct 16).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X