ಬೆಂಕಿ ಅವಘಡ: ಹೊತ್ತಿ ಉರಿದ 'ಬಿಗ್ ಬಾಸ್' ಮನೆ
Recommended Video

ಬೆಂಗಳೂರು, ಫೆಬ್ರವರಿ 22 : ಬೆಂಗಳೂರಿನ ಬಿಡದಿ ಬಳಿಯಿರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು 'ಬಿಗ್ ಬಾಸ್' ಮನೆ ಸುಟ್ಟು ಕರಕಲಾಗಿದೆ.
ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.12 ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.
ಅಗ್ನಿ ದುರಂತ: ಧಗಧಗ ಉರಿದು ಸುಟ್ಟು ಕರಕಲಾದ 'ಬಿಗ್ ಬಾಸ್' ಮನೆ
ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ನಿರ್ಮಿಸಲಾಗಿದ್ದ ಪ್ರತಿ ಸೀಸನ್ ಗೂ ಮರು ನವೀಕರಣಗೊಳ್ಳುತ್ತಿದ್ದ 'ಬಿಗ್ ಬಾಸ್' ಮನೆ ಸದ್ಯ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮುಂಜಾನೆ ಮೂರು ಗಂಟೆ ಹೊತ್ತಿಗೆ ಬಿಗ್ ಬಾಸ್' ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ 'ಬಿಗ್ ಬಾಸ್' ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಇನ್ನೋವೇಟಿವ್ ಫಿಲ್ಮ್ ಸಿಟಿ
ಬಿಗ್ ಬಾಸ್' ಮನೆಯ ಒಳಭಾಗಕ್ಕೂ ಬೆಂಕಿ ಆವರಿಸಿರುವುದರಿಂದ, ಬೆಂಕಿ ನಂದಿಸಲು ಸಾಧ್ಯವಾಗುತ್ತಿಲ್ಲ. ಅದಾಗಲೇ ಮುಕ್ಕಾಲು ಭಾಗದಷ್ಟು 'ಬಿಗ್ ಬಾಸ್' ಮನೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಮೊದಲು ಮೇಣದ ಮ್ಯೂಸಿಯಂಗೆ ತಗುಲಿದ ಬೆಂಕಿ ಕ್ರಮೇಣವಾಗಿ ಬಿಗ್ ಬಾಸ್ ಮನೆಯನ್ನು ಆವರಿಸಿದೆ.

ಮುಂಜಾವಿನಲ್ಲಿ ಹೊತ್ತಿದ ಬೆಂಕಿಗೆ ಬಿಗ್ ಬಾಸ್ ಮನೆ ಆಹುತಿ
ಮುಂಜಾನೆ ಮೂರು ಗಂಟೆ ಹೊತ್ತಿಗೆ 'ಬಿಗ್ ಬಾಸ್' ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ 'ಬಿಗ್ ಬಾಸ್' ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ
ಬಿಗ್ ಬಾಸ್' ಮನೆಯಲ್ಲಿ ಆವರಿಸಿರುವ ಬೆಂಕಿ ನಂದಿಸಲು 11 ಅಗ್ನಿಶಾಮಕ ವಾಹನಗಳಿಂದ ಹರಸಾಹಸ ಪಡಲಾಗುತ್ತಿದೆ. ಆದರೂ, ಬೆಂಕಿ ನಂದಿಸಲು ಇನ್ನೂ ಸಾಧ್ಯವಾಗಿಲ್ಲ.

ಬಿಗ್ ಬಾಸ್ ಮನೆಗೆ ಬೆಂಕಿಯಿಂದ ಕೋಟ್ಯಂತರ ರೂ ನಷ್ಟ
ಬೆಂಕಿ ಅವಘಡದಿಂದಾಗಿ ಕಲರ್ಸ್ ವಾಹಿನಿ ಹಾಗೂ 'ಬಿಗ್ ಬಾಸ್' ನಡೆಸುವ ಎಂಡೆಮಾಲ್ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications