ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಬಂಧನ

ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರು ದುರಂತ ಸಾವಿಗೀಡಾಗಿರುವ ಪ್ರಕರಣದಲ್ಲಿ ಮೊದಲ ಆರೋಪಿಯ ಬಂಧನವಾಗಿದೆ.

By Mahesh
|
Google Oneindia Kannada News

ರಾಮನಗರ, ನವೆಂಬರ್ 08: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರು ದುರಂತ ಸಾವಿಗೀಡಾಗಿರುವ ಪ್ರಕರಣದಲ್ಲಿ ಮೊದಲ ಆರೋಪಿಯ ಬಂಧನವಾಗಿದೆ. ತಾವರೆಕೆರೆ ಪೊಲೀಸರು ಮುಖ್ಯ ಆರೋಪಿ ಚಿತ್ರ ನಿರ್ಮಾಪಕ ಸುಂದರ್ ಪಿ ಗೌಡ ಅವರನ್ನು ಮಂಗಳವಾರ ಸಂಜೆ ಬಂಧಿಸಿದ್ದಾರೆ.

ಬಂಧಿತ ಆರೋಪಿ ಸುಂದರ್ ಗೌಡರನ್ನು ರಾಮನಗರದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, 14ದಿನಗಳ ಕಾಲ ನ್ಯಾಯಾಂಗ ಬಂಧನ ಶಿಕ್ಷೆ ಲಭಿಸಿದೆ. ಸದ್ಯ ರಾಮನಗರದ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಮಿಕ್ಕ ಆರೋಪಿಗಳು ನಾಪತ್ತೆಯಾಗಿದ್ದು, ಹುಡುಕಾಟ ಜಾರಿಯಲ್ಲಿದೆ.[ಖಳನಟರ ಸಾವು: ಮಾಸ್ತಿಗುಡಿ ಚಿತ್ರ ತಂಡದ ವಿರುದ್ಧ ಎಫ್ ಐಆರ್]

Mastigudi Tragedy : Tavarekere police arrest Producer Sundar P Gowda

ಅನಿಲ್ ಮತ್ತು ರಾಘವ್ ಉದಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 304(A) ಹಾಗೂ 308 ಅನ್ವಯ ಕೇಸು ದಾಖಲಾಗಿದೆ. ಆರೋಪ ಸಾಬೀತಾದರೆ ಕನಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಎ-1 ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಅವರು ಎ-2 ಆರೋಪಿ, ಸಹ ನಿರ್ದೇಶಕ ಎ-3 ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ಎ-4 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ. ಸಾಹಸ ಸಹ ನಿರ್ದೇಶಕ ಎ-5 ಆರೋಪಿಯಾಗಿದ್ದು, ಚಿತ್ರದ ನಾಯಕ ನಟ ದುನಿಯಾ ವಿಜಯ್ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ.

ಸೋಮವಾರ ಮಧ್ಯಾಹ್ನ ರಾಮನಗರ ಜಿಲ್ಲೆ ತಾವೆರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಹಂತದ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತ್ತಿತ್ತು. ಹೆಲಿಕಾಪ್ಟರ್​ನಿಂದ ನೀರಿಗೆ ಹಾರಿ ನಾಯಕನಿಂದ ತಪ್ಪಿಸಿಕೊಳ್ಳುವ ಸನ್ನಿವೇಶದಲ್ಲಿ ಇಬ್ಬರು ನಟರು ನೀರುಪಾಲಾಗಿದ್ದರು. ಇಬ್ಬರ ದೇಹ ಇನ್ನೂ ಪತ್ತೆಯಾಗಿಲ್ಲ.

English summary
Tavarekere police on Tuesday arrested Producer Sundar P Gowda in connection with death of two actors Anil and Uday during the climax shoot of Mastigudi Film. The FIR was filed after T G Halli reservoir dam's director filed a formal complaint with the local police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X