ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫೆಬ್ರವರಿ ಅಂತ್ಯಕ್ಕೆ ಬಿಬಿಎಂಪಿ ಬಜೆಟ್: ಸಂಪತ್ ರಾಜ್

|
Google Oneindia Kannada News

ಬೆಂಗಳೂರು, ಫೆಬ್ರವರಿ 07 : ಫೆಬ್ರವರಿ ಮಾಸಾಂತ್ಯದ ವೇಳೆಗೆ ಈ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ, ಈ ಬಾರಿಯ ಬಜೆಟ್ ಗಾತ್ರ 10 ಸಾವಿರ ಕೋಟಿ ರೂ ದಾಟಬಹುದು ಎಂದು ಮೇಯರ್ ಸಂಪತ್ ರಾಜ್ ತಿಳಿಸಿದರು.

ಫೆ.16 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ತಿಂಗಳಾಂತ್ಯದ ವೇಳೆಗೆ ಬಿಬಿಎಂಪಿ ಬಜೆಟ್ ಮಂಡನೆಗೆ ಸಿದ್ಧತೆ ನಡೆದಿದೆ. ಪಾಲಿಕೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಮಹದೇವು ಅವರು ಬಜೆಟ್ ಮಂಡನೆಗೆ ಬೇಕಾದ ಅಗತ್ಯ ತಯಾರಿ ನಡೆಸುತ್ತಿದ್ದಾರೆ.

ಬಜೆಟ್ ಪೂರ್ವಭಾವಿಯಾಗಿ ಈ ವಾರ ಪೂರ್ತಿ ಪಾಲಿಕೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ಬೆಂಗಳೂರಿನ ವಿವಿಧ ಸಂಘ ಸಂಸ್ಥೆಗಳು, ಉದ್ದಿಮೆದಾರರು, ಕನ್ನಡಪರ ಸಂಘಟನೆಗಳು, ಮಾಧ್ಯಮ ಪ್ರತಿನಿಧಿಗಳ ಸಭೆ ನಡೆಸಲಾಗುತ್ತದೆ ಎಂದರು.

Mayor hints BBMP budget crosses Rs.10 thousand crores

ನಗರದ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದಕ್ಕನುಗುಣವಾಗಿ ರಸ್ತೆ, ಕುಡಿಯುವ ನೀರು, ನೈರ್ಮಲ್ಯ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ, ಸೌಲಭ್ಯಗಳನ್ನು ಒದಗಿಸಲು ಸುಮಾರು ೧೦ ಸಾವಿರ ಕೋಟಿ ರೂ ಗೂ ದೊಡ್ಡ ಗಾತ್ರದ ಹಾಗೂ ಜನಪರವಾದ ಬಜೆಟ್ ಮಂಡನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಫೆ.11 ರಂದು ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ: ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಫೆ.11 ಮತ್ತು 25 ರಂದು ಎರಡು ಹಂತದಲ್ಲಿ ಗುರುತಿನ ಚೀಟಿ ನೀಡಲಾಗುತ್ತದೆ. ಬೀದಿ ಬದಿ ವ್ಯಾಪಾರಿಗಳಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 24,600 ಕ್ಕೂ ಹೆಚ್ಚು ವ್ಯಾಪಾರಿಗಳನ್ನು ಗುರುತಿಸಲಾಗಿದೆ.

English summary
Mayor Sampath Raj hinted that the BBMP budget this time will cross Rs.10 thousand crores and preparations are going to table the budget by end of this month. He was addressing the media work in Shivananda circle on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X