ಅನಧಿಕೃತ ಫ್ಲೆಕ್ಸ್ ಹಾವಳಿ: ಮುದ್ರಣ ಮಳಿಗೆಗಳ ಮೇಲೆ ದಾಳಿ

Posted By: Nayana
Subscribe to Oneindia Kannada

ಬೆಂಗಳೂರು, ಡಿಸೆಂಬರ್ 30 : ಅನಧಿಕೃತ ಫ್ಲೆಕ್ಸ್ ಗಳ ಹಾವಳಿ ತಡೆಯಲು ಶನಿವಾರದಿಂದ ಫ್ಲೆಕ್ಸ್ ಮುದ್ರಣ ಮಳಿಗೆಗಳನ್ನು ಸೀಜ್ ಮಾಡಬೇಕು ಎಂದು ಮೇಯರ್ ಆರ್. ಸಂಪತ್ ರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೊಸ ವರ್ಷ ಆಚರಣೆ ಹಿನ್ನೆಲೆ ಭದ್ರತೆಗೆ ಮೇಯರ್ ಸೂಚನೆ

ಪ್ರತಿ ವಾರ್ಡ್ ನಲ್ಲಿಯೂ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಅಧಿಕಾರಿಯನ್ನು ಅಮಾನತು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅನಧಿಕೃತ ಫ್ಲೆಕ್ಸ್ ತೆರವಿಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ಪಡೆದ ಅವರು ಅನಧಿಕೃತ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ಆರಂಭಿಸಬೇಕು. ಅದರ ಜತೆಗೆ ಫ್ಲೆಕ್ಸ್ ಮುದ್ರಣ ಮಾಡುವ ಮಳಿಗೆಗಳನ್ನು ಕೂಡ ಮುಚ್ಚುವಂತೆ ನಿರ್ದೇಶನ ನೀಡಿದ್ದಾರೆ.

Mayor orders for flex printers seizure

ವಾರ್ಡ್ ಮಟ್ಟದ ಸಹಾಯಕ ಎಂಜಿನಿಯರ್ ಗಳು ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್ , ಹೋರ್ಡಿಂಗ್ಸ್ ಗಳ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.
ಜ.15 ಕ್ಕೆ300 ಕಡೆ ಉಚಿತ ವೈಫೈ ಸೌಲಭ್ಯ: ನಗರದ 300 ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಜನವರಿ 15 ರಿಂದ ವೈಫೈ ಸೌಲಭ್ಯ ನೀಡಲಾಗುತ್ತದೆ. ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ನೆರವು ಪಡೆದು ವೈಫೈ ಸೌಲಭ್ಯ ಒದಗಿಸಲಾಗುತ್ತದೆ.

ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಚರ್ಚ್ ಸ್ಟ್ರೀಟ್ ಸೇರಿದಂತೆ ಪ್ರತಿಷ್ಠಿತ ಮತ್ತು ಜನದಟ್ಟಣೆ ಹೆಚ್ಚಿರುವ ಪ್ರದೇಶಗಳು, ಮಾರುಕಟ್ಟೆಗಳು, ಬಸ್ ನಿಲ್ದಾಣ,, ರೈಲು ನಿಲ್ದಾಣದಲ್ಲಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
To curb the unauthorized flex and buntings in the city. BBMP mayor sampathraj issued an order to seize flex and bunting printing units in the city Saturday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ