ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?

|
Google Oneindia Kannada News

Recommended Video

ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರಾ? | Oneindia Kannada

ಬೆಂಗಳೂರು, ಡಿಸೆಂಬರ್ 24: ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಜಾರಕಿಹೊಳಿ ಸಹೋದರರಿಗೆ ಒಂದು ಕಡೆಸಂತೋಷವಾದರೆ ಇನ್ನೊಂದು ಕಡೆಯಿಂದ ಬೇಸರವಾಗಿದೆ.

ರಮೇಶ್ ಜಾರಕಿಹೊಳಿಯನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದರಿಂದ ಬೇಸರವಾಗಿದ್ದು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಸ್ವಲ್ಪ ಸಮಾಧಾನವಾದಂತಿದೆ.

ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ? ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ?

ಒಂದೆಡೆ ರಮೇಶ್ ಜಾರಕಿಹೊಳಿ ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದರೆ ಇನ್ನೊಂದು ವಲಯದಿಂದ ಮನೆಯಲ್ಲಿಯೇ ಮಂತ್ರಿ ಗಿರಿ ಸಿಕ್ಕಮೇಲೆ ರಾಜೀನಾಮೆ ಯಾಕೆ ನೀಡುವುದು ಎನ್ನುವುದು ಅವರ ಭಾವನೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.

Miffed Ramesh Jarkiholi says he will resign as MLA

ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳಲ್ಲಿಯೇ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಗೆ ಸಾರ್ವಜನಿಕವಾಗಿ ಇರಿಸು-ಮುರಿಸು ಉಂಟಾಗಿದೆ.

ಕುಮಾರಸ್ವಾಮಿ ಸರ್ಕಾರದಲ್ಲಿ ಯಾರು ಯಾರು ಸಚಿವರಿದ್ದಾರೆ? ಇಲ್ಲಿದೆ ಪಟ್ಟಿಕುಮಾರಸ್ವಾಮಿ ಸರ್ಕಾರದಲ್ಲಿ ಯಾರು ಯಾರು ಸಚಿವರಿದ್ದಾರೆ? ಇಲ್ಲಿದೆ ಪಟ್ಟಿ

ಆದರೆ, ಸಹೋದರ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿರುವುದರಿಂದ ರಮೇಶ್ ಇಟ್ಟಕ್ಕಿಗೆ ಸಿಲುಕಿದ್ದಾರೆ. ಸಂಪುಟ ವಿಸ್ತರಣೆ ಪಟ್ಟಿ ಹೊರ ಬೀಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ಯಾರ ಕೈಗೂ ಸಿಕ್ಕಿರಲಿಲ್ಲ.

ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ

ಆದರೆ ಭಾನುವಾರ ಬೆಳಗ್ಗೆ ಗೋಕಾಕ್ ನ ತಮ್ಮ ಫಾರ್ಮ್ ಹೌಸ್‌ನಲ್ಲಿ ಬ್ಯಾಡ್ಮಿಂಟನ್ ಆಡಿ ಹೊರ ಬರುವಾಗ ಎದುರಾದ ಮಾಧ್ಯಮದವರ ಜೊತೆ ಮಾತನಾಡಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿ ಹೊರಟಿದ್ದರು.

ಶಾಸಕ ಸ್ಥಾನಕ್ಕೆ ಇನ್ನೊಂದು ವಾರದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಆಡಿಯೋ ವೈರಲ್ ಆಗಿದೆ. ಆದರೆ ಭಾನುವಾರದಿಂದ ಅವರ ಮೊಬೈಲ್ ನಾಟ್ ರೀಚಬಲ್ ಇದ್ದು, ಕೆಲವರು ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದ್ದರೆ ಇನ್ನು ಕೆಲವರು ನಿಗೂಢ ಸ್ಥಳಗ್ಗೆ ಹೋಗಿದ್ದಾರೆ ಎಂದು ಹೇಳುತ್ತಿದ್ದಾರೆ.

ಇಂದು ಪ್ರಮಾಣವಚನ ನಡೆಯೋದು ಅನುಮಾನ: ಬಿಎಸ್ ವೈ ಇಂದು ಪ್ರಮಾಣವಚನ ನಡೆಯೋದು ಅನುಮಾನ: ಬಿಎಸ್ ವೈ

ರಮೇಶ್ ಅವರು ಸತೀಶ್ ಅವರಿಗೆ ಸಚಿವ ಸ್ಥಾನ ದೊರೆತಿರುವುದಕ್ಕೆ ಸಂತಸ ಪಟ್ಟು ಶಾಸಕ ಸ್ಥಾನದಲ್ಲಿ ಮುಂದುವರೆಯುತ್ತಾರೋ ಅಥವಾ ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಬೇಸರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೋ ಎಂಬುದು ಸಧ್ಯದ ಕುತೂಹಲವಾಗಿದೆ.

English summary
A day after being dropped from the state cabinet, former minister Ramesh Jarkiholi has said he has decided to resign as MLA post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X