ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿವೈಎಸ್ಪಿ ಗಣಪತಿ ಕೇಸ್: ತನಿಖೆ ತೀವ್ರಗೊಳಿಸಿದ ಸಿಬಿಐ

By Mahesh
|
Google Oneindia Kannada News

ಬೆಂಗಳೂರು, ನವೆಂಬರ್ 15: ಸುಪ್ರೀಂಕೋರ್ಟಿನ ನಿರ್ದೇಶನದಂತೆ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ತಂಡವು ಚುರುಕುಗೊಳಿಸಿದೆ.

ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದ Timelineಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದ Timeline

ಮಂಗಳವಾರದಂದು ಮಡಿಕೇರಿಯಲ್ಲಿದ್ದ ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಗಣಪತಿ ಅವರ ಕುಟುಂಬದ ಸದಸ್ಯರನ್ನು ವಿಚಾರಣೆಗೊಳಪಡಿಸಲಿದ್ದಾರೆ. ತನಿಖೆಯ ಬೆಳವಣಿಗೆಗಳ ಮುಖ್ಯಾಂಶ ಇಲ್ಲಿದೆ:

* ಚೆನ್ನೈ ಸಿಬಿಐ ಕಚೇರಿಯ ತನಿಖಾಧಿಕಾರಿ ತಲೈಮಣಿ ನೇತೃತ್ವದ ತಂಡದ ಅಧಿಕಾರಿಗಳು ಬೆಂಗಳೂರಿನತ್ತ ಮುಖ ಮಾಡಿದ್ದಾರೆ.
* ಬಳ್ಳಾರಿ ರಸ್ತೆಯಲ್ಲಿರುವ ಸಿಬಿಐ ಕಚೇರಿಯಲ್ಲಿ ಗಣಪತಿಯವರ ಅಕ್ಕ ಸಬಿತಾ ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ. ಈ ಕುರಿತಂತೆ ನಿನ್ನೆ ನೋಟಿಸ್ ನೀಡಲಾಗಿತ್ತು.

* ಗಣಪತಿ ಸಹೋದರ ಎಂ.ಕೆ.ಮಾಚಯ್ಯ ಹಾಗೂ ಪ್ರಮುಖ ಸಾಕ್ಷಿಗಳಾದ ಬೆಳ್ಯಪ್ಪ, ಜಗನ್‌ ಅವರಿಂದ ಹೇಳಿಕೆ ಪಡೆಯಲಾಗಿದೆ.

ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?
* ಮಂಗಳವಾರದಂದು ಬೆಳಗ್ಗೆ 10ಕ್ಕೆ ವಿನಾಯಕ ವಸತಿ ಗೃಹಕ್ಕೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಠಡಿ ಪರಿಶೀಲಿಸಿ, ಲಾಡ್ಜ್ ಸಿಬ್ಬಂದಿ ಹೇಳಿಕೆ ಪಡೆದಿದ್ದಾರೆ.

CBI to quiz Ganapathy family members
* ಮಂಗಳವಾರ ಸಂಜೆ ದೆಹಲಿಯಿಂದ ಬಂದ ವಿಧಿ ವಿಜ್ಞಾನ ಪ್ರಯೋಗಾಲಯ(FSL)ದ ತಜ್ಞರು ಘಟನೆ ನಡೆದ ಕೊಠಡಿ ಸಂಖ್ಯೆ 315ರ ಬಾಗಿಲು ತೆಗಿಸಿ ಪರಿಶೀಲನೆ ನಡೆಸಿದರು. ಮಹಜರ್ ಮಾಡುವ ಸಂದರ್ಭದಲ್ಲಿ ಬುಲೆಟ್ ಪತ್ತೆಯಾಗಿದೆ.

*ಇನ್‌ಸ್ಪೆಕ್ಟರ್‌ ಮೇದಪ್ಪ, ಎಸ್ಐ ಭರತ್‌, ಮರಣೋತ್ತರ ಪರೀಕ್ಷೆ ನಡೆಸಿದ್ದ ಜಿಲ್ಲಾ ಆಸ್ಪತ್ರೆಯ ಡಾ.ಶೈಲಜಾ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ

ವಿನಾಯಕ್ ಲಾಡ್ಜಿನ ರೂಮ್ ನಂಬರ್ 315ರಲ್ಲಿ ಜುಲೈ 7, 2016ರಂದು ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿದ್ದ ಗಣಪತಿ ಅವರು ಅಂದಿನ ಗೃಹ ಸಚಿವ ಕೆಜೆ ಜಾರ್ಜ್, ಹಿರಿಯ ಅಧಿಕಾರಿಗಳಾದ ಪ್ರಣವ್ ಮೋಹಂತಿ ಹಾಗೂ ಎಎಂ ಪ್ರಸಾದ್ ಅವರ ಮೇಲೆ ಆರೋಪ ಹೊರೆಸಿದ್ದರು. ಈ ಕುರಿತಂತೆ ಸಿಐಡಿ ತನಿಖೆ ನಡೆದು, ಮೂವರು ಆರೋಪಿಗಳ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೇಹಾಲ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈಗ ಸುಪ್ರೀಂಕೋರ್ಟಿನ ಆದೇಶದಂತೆ ಸಿಬಿಐ ತಂಡ ತನಿಖೆ ನಡೆಸುತ್ತಿದೆ.

English summary
Following a Supreme Court directive, a team from Central Bureau of Investigation (CBI), probing the death of DySP M K Ganapathy, visiting Bengaluru today(November 15). CBI will probe Ganapathy's family members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X