ಮಾಯಕೊಂಡ ಕ್ಷೇತ್ರದ ಶಾಸಕರ ಪುತ್ರಿ ನಾಪತ್ತೆ, ದೂರು

Posted By: Gururaj
Subscribe to Oneindia Kannada

ಬೆಂಗಳೂರು, ಮಾರ್ಚ್ 08 : ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿ ನಾಪತ್ತೆಯಾಗಿದ್ದಾರೆ. ಪುತ್ರಿ ನಾಪತ್ತೆಯಾಗಿರುವ ಕುರಿತು ಶಾಸಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಶಿವಮೂರ್ತಿ ನಾಯ್ಕ್ ಪುತ್ರಿ ಲಕ್ಷ್ಮೀ ನಾಯಕ್ ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದಾರೆ ಎಂದು ಯಲಹಂಕ ನ್ಯೂಟೌನ್ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ಪುತ್ರಿಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ಮಾಯಕೊಂಡ ಮೀಸಲು ಕ್ಷೇತ್ರದಲ್ಲಿ ಗೆಲುವು ಯಾರಿಗೆ ಮೀಸಲು?

ಶಿವಮೂರ್ತಿ ನಾಯ್ಕ್ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕರು.ಲಕ್ಷ್ಮೀ ನಾಯಕ್ ಅವರಿಗೆ ಮದುವೆ ನಿಶ್ಚಯವಾಗಿತ್ತು.

ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಬಂಧನ

'ಮಾಸ್ತಿಗುಡಿ' ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಪ್ರೀತಿಸುತ್ತಿದ್ದೇನೆ, ಅವರನ್ನು ವಿವಾಹವಾಗುತ್ತೇನೆ ಎಂದು ಲಕ್ಷ್ಮೀ ನಾಯಕ್ ಸ್ನೇಹಿತೆಯರ ಜೊತೆ ಹೇಳಿದ್ದರು ಎಂದು ತಿಳಿದುಬಂದಿದೆ.

Shivamurthy Naik

ಬುಧವಾರ ಸಂಜೆಯಿಂದಲಕ್ಷ್ಮೀ ನಾಯಕ್ ಮೊಬೈಲ್ ಫೋನ್ ಸ್ವಿಚ್ ಆಫ್‌ ಆಗಿದೆ. ಆಕೆಯನ್ನು ಹುಡುಕಿಕೊಡಿ ಎಂದು ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

ಐಎಎಸ್ ಅಧಿಕಾರಿಗೆ ಧಮಕಿ, ಶಿವಮೂರ್ತಿ ನಾಯ್ಕ್ ಕಿವಿ ಹಿಂಡಿದ ಸಿಎಂ

ಮೈಸೂರಿಗೆ ಹೋಗಿದ್ದರು : ಸುಂದರ್ ಗೌಡ ಮತ್ತು ಲಕ್ಷ್ಮೀ ನಾಯ್ಕ್ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು. ಬುಧವಾರ ಮೈಸೂರಿಗೆ ಹೋಗುವುದಾಗಿ ಸ್ನೇಹಿತರ ಬಳಿ ಲಕ್ಷ್ಮೀ ಹೇಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು ದೂರು ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ. ಮೈಸೂರಿಗೂ ತೆರಳಿ ತನಿಖೆ ನಡೆಸಲು ತಂಡವನ್ನು ರಚನೆ ಮಾಡಲಾಗಿದೆ. ಮೈಸೂರು ಪೊಲೀಸರ ಸಹಕಾರವನ್ನು ಪಡೆಯಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Davanagere district Mayakonda MLA K. Shivamurthy Naik filed complaint to Yelahanka New Town police station in his complaint he said that his daughter Lakshmi Naik missing form Wednesday, March 7, 2018 evening.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ