ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಶ್ಲೀಲ ವಿಡಿಯೋ ಬಹಿರಂಗ :ಎಂಎಲ್‌ಸಿ ರಘು ಆಚಾರ್‌ಗೆ ಬೆದರಿಕೆ ಕರೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 11: ಅಶ್ಲೀಲ ವಿಡಿಯೋ ಬಹಿರಂಗ ಮಾಡುತ್ತೇವೆ ಎಂದು ವಿಧಾನ ಪರಿಷತ್‌ ಸದಸ್ಯರ ರಘು ಆಚಾರ್ ಅವರಿಗೆ ಬೆದರಿಕೆ ಕರೆ ಬಂದಿದ್ದು, ಈ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜನಾರ್ಧನ ಪೂಜಾರಿಗೆ ಬೆದರಿಕೆಯೊಡ್ಡಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ ಜನಾರ್ಧನ ಪೂಜಾರಿಗೆ ಬೆದರಿಕೆಯೊಡ್ಡಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

ಕಳೆದ ಮೂರ್ನಾಲ್ಕು ದಿನಗಳಿಂದ ನಾಲ್ಕೈದು ಮಂದಿ ಬೆದರಿಕೆ ಕರೆ ಮಾಡುತ್ತಿದ್ದಾರೆ, ಅಶ್ಲೀಲ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ. ರಘು ಆಚಾರ್ ಸರ್ಜಾಪುರ ನಿವಾಸಿಯಾಗಿದ್ದಾರೆ.

ಎಂಎಲ್‌ಸಿ ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ ಎಂಎಲ್‌ಸಿ ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ

ಬೆಳ್ಳಂದೂರಿನಲ್ಲಿರುವ ನಿಮ್ಮ ಕಚೇರಿಗೆ ಮುತ್ತಿಗೆ ಹಾಕಿ ನಿಮ್ಮ ರಾಜಕೀಯ ಜೀವನ ಹಾಳು ಮಾಡುತ್ತೇವೆ ಎಂಬುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿದ್ದಾರೆ. ಆರೋಪಿ ಡಿ.4ರಂದು ಮೊದಲ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ.

MLC Raghu is getting threatening call over obscene video

ಮೊದಲು ರಘು ಅವರು ನಿರ್ಲಕ್ಷ್ಯ ಮಾಡಿದ್ದರು. ಇದಾದ ಬಳಿಕವೂ ನಿರಂತರವಾಗಿ ಹತ್ತಾರು ಬಾರಿ ಕರೆ ಬಂದ ಬಳಿಕ ದೂರು ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

English summary
Congress MLC Raghu achar is getting threatening call over obscene video. He filed complaint in local police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X