ವಿಧಾನ ಪರಿಷತ್ ಸದಸ್ಯೆ ವಿಮಲಾ ಗೌಡ ವಿಧಿವಶ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 17: ವಿಧಾನ ಪರಿಷತ್ ಸದಸ್ಯೆ ಹಾಗೂ ಬಿಜೆಪಿಯ ಹಿರಿಯ ಸದಸ್ಯೆ ವಿಮಲಾ ಗೌಡ ಅವರು, ಸೋಮವಾರ ಸಂಜೆ ವಿಧಿವಶರಾಗಿದ್ದಾರೆ.

ಹೃದ್ರೋಗದಿಂದ ಬಳಲುತ್ತಿದ್ದ ಅವರು, ಜನವರಿ ತಿಂಗಳಿಂದ ನಾರಾಯಣ ಹೃದಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು, ಸೋಮವಾರ ಸಂಜೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

MLC Vimala Gowda Passes away

2011ರಲ್ಲಿ ಅವರು, ವಿಧಾನ ಪರಿಷತ್ ಸದಸ್ಯೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆಗ, ವಿಧಾನ ಪರಿಷತ್ ಉಪಸಭಾಪತಿಯಾಗಿದ್ದ ಜೆಡಿಎಸ್‌ನ ಪುಟ್ಟಣ್ಣ ಅವರ ಪದಚ್ಯುತಿಯಿಂದ ತೆರವಾದ ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನದ ಚುನಾವಣೆಗೆ ಅಭ್ಯರ್ಥಿಯಾಗಿ ವಿಮಲಾಗೌಡ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Member of Legislative Councel Vimala Gowda expired on April 17, 2017 at Narayana Hrudayalaya of Bengaluru. She was suffering from cardiac disorder since sometime and was undergoing treatment since January of this year.
Please Wait while comments are loading...