ಕಲಬುರ್ಗಿ ಹತ್ಯೆ ಕೇಸ್: ಸಿಸಿಟಿವಿಯಿಂದ ಮಹತ್ವದ ಸುಳಿವು ಪತ್ತೆ
ಬೆಂಗಳೂರು, ಸೆ.01: ಸಾಹಿತಿ ಎಂಎಂ ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ತಂಡಕ್ಕೆ ಮಂಗಳವಾರ ಮಹತ್ವದ ಸುಳಿವು ಸಿಕ್ಕಿದೆ. ಆರೋಪಿಗಳನ್ನು ಹುಡುಕಿಕೊಂಡು ಒಂದು ತಂಡ ಕೊಲ್ಹಾಪುರಕ್ಕೆ ತೆರಳಿದರೆ, ಮತ್ತೊಂದು ತಂಡಕ್ಕೆ ಸಿಸಿಟಿವಿ ದೃಶ್ಯಾವಳಿಗಳಿಂದ ಮಹತ್ವದ ವಿಷಯ ತಿಳಿದು ಬಂದಿದೆ. ಹತ್ಯೆ ದಿನದಂದು ಕಲಬುರ್ಗಿ ಅವರ ಮನೆಗೆ ಇಬ್ಬರಲ್ಲ, ನಾಲ್ವರು ಬಂದಿದ್ದರು ಎಂಬ ಮಾಹಿತಿ ಸಿಕ್ಕಿದೆ.
ಪ್ರೊ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿ ಅವರ ಹತ್ಯೆ ನಡೆದ ದಿನದಂದು ಮೋಟರ್ ಸೈಕಲ್ ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳಲ್ಲದೆ ಇನ್ನಿಬ್ಬರು ವ್ಯಕ್ತಿಗಳು ಸಾಹಿತಿಗಳ ಮನೆಯ ಬಳಿ ಸುಳಿದಾಡಿರುವುದು ಕಂಡು ಬಂದಿದೆ. ಅಲ್ಲದೆ, ಬೈಕಿನಲ್ಲಿ ಬಂದಿದ್ದ ವ್ಯಕ್ತಿಗಳು ಹತ್ಯೆ ಮಾಡಿದ ನಂತರ ಹೊರಗಡೆ ಕಾರಿನಲ್ಲಿ ಕಾದಿದ್ದ ಇಬ್ಬರಿಗೆ ಕೆಲಸ ಆಯಿತು ಎಂಬಂತೆ ಸೂಚಿಸಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಗೊತ್ತಾಗಿದೆ. [ಸಿಐಡಿ ಪೊಲೀಸರ ತಂಡ ಕೊಲ್ಹಾಪುರಕ್ಕೆ]

ಸಿಸಿಟಿವಿ ದೃಶ್ಯಾವಳಿಗಳು ಈ ಪ್ರಕರಣದಲ್ಲಿ ಮಹತ್ವದ ಪಾತ್ರವಹಿಸಲಿವೆ. ಸಾಹಿತಿಗಳನ್ನು ಕೊಲೆ ಮಾಡಲು ಬಾಡಿಗೆ ಹಂತಕರನ್ನು ಬಳಸಿಕೊಂಡಿದ್ದರೂ ಘಟನೆ ನಡೆದ ಸಮಯದಲ್ಲಿ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಯಾರು ಎಂಬುದು ತಿಳಿಯಲು ಸಿಸಿಟಿವಿ ದೃಶ್ಯಾವಳಿ ಸಹಾಯಕವಾಗಲಿದೆ ಎಂದು ಸಿಐಡಿ ತನಿಖಾ ತಂಡದವರು ಒನ್ ಇಂಡಿಯಾ ಪ್ರತಿನಿಧಿಗೆ ಹೇಳಿದ್ದಾರೆ. [ಕಲಬುರ್ಗಿ ಹತ್ಯೆ, ಸಿಬಿಐ ತನಿಖೆಗೆ ನಿರ್ಧಾರ]
ಧಾರವಾಡದ ನಿವಾಸದಲ್ಲಿ ಆಗಸ್ಟ್ 30ರಂದು ಹತ್ಯೆಯಾದ ಪ್ರೊ.ಎಂಎಂ ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತಂಡ ಕೈಗೆತ್ತಿಕೊಂಡಿದ್ದು, ನಾಲ್ಕು ತಂಡಗಳು ವಿವಿಧ ಕೋನಗಳಿಂದ ತನಿಖೆ ಕೈಗೊಂಡಿವೆ.
ಕೌಟುಂಬಿಕ ಹಿನ್ನಲೆ, ಆಸ್ತಿ ಕಲಹ, ಕಲಬುರ್ಗಿ ಅವರು ಸುತ್ತಿಕೊಂಡಿದ್ದ ವಿವಾದಗಳು, ಬಾಡಿಗೆ ಹಂತಕರನ್ನು ಗೊತ್ತು ಮಾಡಿದ್ದು ಯಾರು ಸೇರಿದಂತೆ ಹಲವು ಪ್ರಶ್ನೆಗಳನ್ನು ಹೊತ್ತುಕೊಂಡು ತನಿಖೆ ಮುಂದುವರೆಸಲಾಗಿದೆ. ಈ ನಡುವೆ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಡ ಹೆಚ್ಚಾಗುತ್ತಿದೆ.(ಒನ್ ಇಂಡಿಯಾ ಸುದ್ದಿ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications