ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

116 ದಿನಗಳ ನಂತರ ಜೈಲಿನಿಂದ ಹೊರಬಂದ ಮೊಹಮ್ಮದ್ ನಲಪಾಡ್‌

By Manjunatha
|
Google Oneindia Kannada News

ಬೆಂಗಳೂರು, ಜೂನ್ 14: ವಿದ್ವತ್ ಮೇಲೆ ಹಲ್ಲೆ ನಡೆಸಿ ಸತತ 116 ದಿನಗಳ ಕಾಲ ಜೈಲು ವಾಸ ಅನುಭವಿಸಿದ ನಂತರ ಇಂದು ಮೊಹಮ್ಮದ್ ನಲಪಾಡ್ ಜೈಲಿನಿಂದ ಹೊರಬಂದಿದ್ದಾರೆ.

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಇಂದು (ಜೂನ್ 14) ರಾತ್ರಿ 7:22 ಕ್ಕೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಮೊಹಮ್ಮದ್ ನಲಪಾಡ್, ಬಿಳಿ ಬಣ್ಣದ ಆಡಿ ಕಾರಿನಲ್ಲಿ ಮನೆಗೆ ತೆರಳಿದರು. ಜೈಲಿನಿಂದ ಹೊರಬಂದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡದೆಯೇ ತೆರಳಿದರು.

Mohammed Nalapad released from jail on bail

ಮೊಹಮ್ಮದ್ ನಲಪಾಡ್ ಮತ್ತು ಆತನ ಗೆಳೆಯರು ಫೆಬ್ರವರಿ 17 ರಂದು ಬ್ರಿಗೆಡ್ ರಸ್ತೆಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಆ ನಂತರ ನಲಪಾಡ್ ಸೇರಿ ಆತನ ಗೆಳೆಯರು ಫೆಬ್ರವರಿ 19ರಂದು ಪೊಲೀಸರಿಗೆ ಶರಣಾಗಿದ್ದರು.

English summary
Vidvat assault case main accused Mohammed Nalapad released today from Parappana Agrahara Jail on conditional bail. He spent 116 days in Jail. He is son of congress MLA NA Haris.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X