ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಎಸ್ ರಾಮಯ್ಯ ಕಾಲೇಜಿನಲ್ಲಿ ragging

|
Google Oneindia Kannada News

ragging
ಬೆಂಗಳೂರು, ಅ.7 : ನಗರದ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ನಡೆದ ragging ಪ್ರಕರಣ ವಿವಾದ ಹುಟ್ಟುಹಾಕಿದೆ. ragging ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದ್ಯಾರ್ಥಿಯನ್ನು ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಎಂ.ಎಸ್.ರಾಮಯ್ಯ ಕಾಲೇಜಿನ ದ್ವಿತೀಯ ವರ್ಷದ ಬಿಬಿಎಂ ವಿದ್ಯಾರ್ಥಿಗಳು ಮತ್ತಿಕೆರೆಯ ಪಿಜಿಯಲ್ಲಿ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ragging ಮಾಡುತ್ತಿದ್ದರು. ಇದರಿಂದ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಸ್ವಸ್ಥ ವಿದ್ಯಾರ್ಥಿಯ ಸ್ನೇಹಿತ ಶ್ರೀಕಾಂತ್ ಅವರನ್ನು ಕಾಲೇಜಿನ ಆಡಳಿತ ಮಂಡಳಿ 3 ದಿನಗಳ ಕಾಲ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದೆ.

ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ಬಿಬಿಎಂ ವಿದ್ಯಾರ್ಥಿಯನ್ನು ನಗ್ನಗೊಳಿಸಿ ಥಳಿಸಿದ್ದರು ಇದರಿಂದ ಗಾಯಗೊಂಡಿರುವ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಸೋಮವಾರ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು.

ragging ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ ಮೂರು ದಿನಗಳ ಕಾಲ ಅಮಾನತುಗೊಳಿಸಿದೆ. ಆದರೆ, ragging ಮಾಡುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಕುರಿತು ಪ್ರತಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು ಕಾಲೇಜಿನ ಪ್ರಾಶುಂಪಾಲರು, ragging ನಡೆದಿರುವುದು ಕಾಲೇಜಿನ ಆವರಣದ ಹೊರಗಡೆ. ಗಾಯಗೊಂಡಿರುವ ವಿದ್ಯಾರ್ಥಿಯ ವೈದ್ಯಕೀಯ ಶುಲ್ಕವನ್ನು ಆಡಳಿತ ಮಂಡಳಿ ಪಾವತಿ ಮಾಡಲಿದೆ ಎಂದು ಹೇಳಿದ್ದಾರೆ. (ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ragging)

English summary
Two first year business management students of M S Ramaiah college were allegedly disrobed and beaten by their seniors at a paying guest accommodation in Mattikere, near the college, on Sunday, October 6. While the students alleged ragging, the college management has suspended one of the students for three days for making the issue public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X