ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫ್ರಾನ್ಸ್ ರಾಯಭಾರಿ ಕಚೇರಿಗೆ ಪತ್ರ ಬರೆದಿದ್ದು ರಫೀಕ್?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜನವರಿ 25 : ಬೆಂಗಳೂರಿನಲ್ಲಿರುವ ಫ್ರಾನ್ಸ್ ರಾಯಭಾರಿ ಕಚೇರಿಗೆ ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ. ಐಎಸ್‌ಐಎಸ್ ಶಂಕಿತ ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಎನ್‌ಐಎ ರಾಯಭಾರ ಕಚೇರಿಗೆ ಪತ್ರ ಬರೆದಿರುವುದು ರಫೀಕ್ ಅಹಮದ್ ಎಂದು ಶಂಕಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಸಮೀಪ ಶನಿವಾರ ರಫೀಕ್ ಅಹಮದ್‌ ಬಂಧಿಸಲಾಗಿದೆ. ಪೊಲೀಸರು ಬಂಧಿಸಲು ಹೋದಾಗ ಅವರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿ, ರಫೀಕ್ ಪರಾರಿಯಾಗಲು ಯತ್ನಿಸಿದ್ದ. ಯುವಕರನ್ನು ಉಗ್ರ ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದ್ದ ರಫೀಕ್, ದೇಶಾದ್ಯಂತ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. [ಬೆಂಗಳೂರಿನ ಫ್ರಾನ್ಸ್ ರಾಯಭಾರಿ ಕಚೇರಿಗೆ ಬೆದರಿಕೆ]

france

ಅಲ್‌ಖೈದಾ ಉಗ್ರ ಸಂಘಟನೆ ಹೆಸರಿನಲ್ಲಿ ಜನವರಿ 11ರಂದು ಬೆಂಗಳೂರಿನಲ್ಲಿರುವ ಫ್ರಾನ್ಸ್ ರಾಯಭಾರ ಕಚೇರಿಗೆ ಪತ್ರ ಬಂದಿತ್ತು. ಪತ್ರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲ್ಲಾಂಡೆ ಅವರು ಬರುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಲಾಗಿತ್ತು. ಚೆನ್ನೈನಿಂದ ಈ ಪತ್ರವನ್ನು ಪೋಸ್ಟ್ ಮಾಡಲಾಗಿತ್ತು. [ಚಿತ್ರಗಳು ಹೊಲ್ಲಾಂಡೆ ಮೊದಲ ದಿನದ ಭಾರತ ಪ್ರವಾಸ]

ರಫೀಕ್ ಈ ಪತ್ರವನ್ನು ಚೆನ್ನೈನಿಂದ ಪೋಸ್ಟ್ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ರಾಯಭಾರ ಕಚೇರಿಗೆ ಬಂದ ಪತ್ರದಲ್ಲಿ ಭಾರತದ ಭೂಪಟವಿದೆ ಮತ್ತು ಅಲ್‌ಖೈದಾ ಎಂದು ಬರೆದಿದೆ. ಶನಿವಾರ ರಫೀಕ್ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ಅವರ ಮನೆಯಲ್ಲಿ ಇಂತಹ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ದರಿಂದ, ರಫೀಕ್ ಪತ್ರ ಬರೆದಿರಬಹುದು ಎಂದು ಶಂಕಿಸಲಾಗಿದೆ.

ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲ್ಲಾಂಡೆ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಭಾನುವಾರ ಭಾರತಕ್ಕೆ ಆಗಮಿಸಿದ್ದಾರೆ. ಜನವರಿ 26ರ ಮಂಗಳವಾರ ಅವರು ನವದೆಹಲಿಯಲ್ಲಿ 67ನೇ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

English summary
The mystery behind the letter that was sent to the French Consulate in Bengaluru threatening attacks may have been solved. NIA has learnt from the police, that the letter may have been sent by person called Rafeeq Ahmed. Ahmed was arrested in Bengaluru last week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X