ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಮನ್ವಯ ಸಮಿತಿ ಅಸ್ತು ಅಂದ್ರೆ ಸಿದ್ದರಾಮಯ್ಯ ಸಿಎಂ:ಶಿವಶಂಕರ ರೆಡ್ಡಿ

By Nayana
|
Google Oneindia Kannada News

Recommended Video

ಸಮನ್ವಯ ಸಮಿತಿ ಒಪ್ಪಿದ್ರೆ ಸಿದ್ದರಾಮಯ್ಯ ಮತ್ತೆ ಸಿ ಎಂ ಆಗೋದು ಪಕ್ಕಾ | Oneindia Kannada

ಬೆಂಗಳೂರು, ಆಗಸ್ಟ್ 27: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ ಎಂದರೆ ಎಲ್ಲರಿಗೂ ಸಮ್ಮತಿ ಇದೆ, ಎರಡೂ ಪಕ್ಷದ ಸಮನ್ವಯ ಸಮಿತಿ ಒಪ್ಪಿಗೆ ಸೂಚಿಸಿದರೆ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಚಿವ ಎನ್‌.ಎಚ್‌.ಶಿವಶಂಕರ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಚಾಮರಾಜನಗರದಲ್ಲಿ ಎರಡು ಪಕ್ಷಗಳ ಸಮನ್ವಯ ಸಮಿತಿಯವರು ಕುಳಿತು ತೀರ್ಮಾನ ಮಾಬೇಕು, ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿ ಎಂದರೆ ಅದಕ್ಕೆ ನಾವೆಲ್ಲರೂ ಬದ್ಧ ಎಂದು ಶಿವಶಂಕರ ರೆಡ್ಡಿ ಹೇಳಿದರು.

ಮತ್ತೆ ಮುಖ್ಯಮಂತ್ರಿಯಾಗ್ತೀನಿ : ಸಿದ್ದರಾಮಯ್ಯ ಮಾತಿನ ಒಳಾರ್ಥವೇನು? ಮತ್ತೆ ಮುಖ್ಯಮಂತ್ರಿಯಾಗ್ತೀನಿ : ಸಿದ್ದರಾಮಯ್ಯ ಮಾತಿನ ಒಳಾರ್ಥವೇನು?

ಈಗಾಗಲೇ ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರೆ ಎನ್ನುವ ಮಾತುಗಳು ರಾಜಕೀಯವ ವಲಯದಲ್ಲಿ ಹರಿದಾಡುತ್ತಿದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದಲ್ಲಿ ಆಷಣ ಮಾಡುವಾಗ ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಇನ್ನೊಂದೆಡೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿತ್ತು, ಇನ್ನೊಂದೆಡೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದರು, ನಾನು ಮುಖ್ಯಮಂತ್ರಿ ಸ್ಥಾನವನ್ನ ಉಳಿಸಿಕೊಳ್ಳಲು ಸಮಯ ವ್ಯರ್ಥ ಮಾಡುವುದಿಲ್ಲ, ಜನರಿಗಾಗಿ ಕೆಲಸ ಮಾಡುತ್ತಿದ್ದೇನೆ, ಎಷ್ಟು ದಿನ ಮುಖ್ಯಮಂತ್ರಿಯಾಗಿದ್ದೇನೆ ಎನ್ನುವುದು ಮುಖ್ಯವಲ್ಲ, ಏನು ಕೆಲಸ ಮಾಡಿದ್ದೇನೆ ಎನ್ನುವುದು ಮುಖ್ಯ ಎಂದಿದ್ದರು.

ನಾನು 2023ಕ್ಕೆ ಸಿಎಂ ಆಗ್ಬೇಕು ಅಂದಿದ್ದು, ಉಲ್ಟಾ ಹೊಡೆದ ಸಿದ್ದರಾಮಯ್ಯ ನಾನು 2023ಕ್ಕೆ ಸಿಎಂ ಆಗ್ಬೇಕು ಅಂದಿದ್ದು, ಉಲ್ಟಾ ಹೊಡೆದ ಸಿದ್ದರಾಮಯ್ಯ

ಇದಕ್ಕೆ ಪುಷ್ಟಿ ಎನ್ನುವಂತೆ ಇದೀಗ ಸಚಿವ ಶಿವಶಂಕರ ರೆಡ್ಡಿ ಕೂಡ ಮುಖ್ಯಮಂತ್ರಿ ಸ್ಥಾನ ಬದಲು ಕುರಿತು ಮಾತನಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಮಾಡಲು ನಾವು ಬದ್ಧರಾಗಿದ್ದೇವೆ, ಸಮನ್ವಯ ಸಮಿತಿ ಒಪ್ಪಿಗೆ ನೀಡಿದರೆ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಸಮನ್ವಯ ಸಮಿತಿಯಲ್ಲಿ ನಿರ್ಧಾರ ಕೈಗೊಂಡರೂ ಕೂಡ ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ. ಮೈತ್ರಿ ಸರ್ಕಾರವು ಸರ್ಕಾರವನ್ನು ಭದ್ರ ಮಾಡತ್ತೇ ಹೊರತು ಒಡೆಯಲು ಪ್ರಯತ್ನ ಮಾಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿದ್ದಾರೆ.

ಸಿದ್ದರಾಮಯ್ಯ ಒಂಟಿಯಲ್ಲ ಎಂದ ಚೆಲುವರಾಯಸ್ವಾಮಿ

ಸಿದ್ದರಾಮಯ್ಯ ಒಂಟಿಯಲ್ಲ ಎಂದ ಚೆಲುವರಾಯಸ್ವಾಮಿ

ಮಾಜಿ ಸಿಎಂ ಸಿದ್ದರಾಮಯ್ಯ ಒಂಟಿಯಲ್ಲ. ಒಂಟಿ ಅಂತಾ ಯಾರಾದರೂ ಅಂದುಕೊಂಡರೆ ಅವರಷ್ಟು ದಡ್ಡರು ಮತ್ಯಾರು ಇಲ್ಲ. ಎಲ್ಲ ಶಾಸಕರು, ಮಾಜಿ ಶಾಸಕರು, ಸಚಿವರು, ಸಂಸದರು ಅವರ ಜತೆಗಿದ್ದಾರೆ. ನಾನು ಯಾವುದೇ ಕಾರಣಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನ ಜೆಡಿಎಸ್ ನವರು ಟಾರ್ಗೆಟ್ ಮಾಡಿದ್ದಾರೆ. ಇದು ಎಲ್ಲ ನಾಯಕರಿಗೂ ಗೊತ್ತಿದೆ. ಆದರೂ ಅನಿವಾರ್ಯವಾಗಿ ಸಹಿಸಿಕೊಂಡು ಇರಬೇಕಾಗಿದೆ ಎಂದರು.

 ಕಾಲ ಚಕ್ರ ಉರುಳುತ್ತಿದೆ, ಕಾಂಗ್ರೆಸ್ ಗೆಲ್ಲುತ್ತೆ, ಜೆಡಿಎಸ್ ಸೋಲುತ್ತೆ

ಕಾಲ ಚಕ್ರ ಉರುಳುತ್ತಿದೆ, ಕಾಂಗ್ರೆಸ್ ಗೆಲ್ಲುತ್ತೆ, ಜೆಡಿಎಸ್ ಸೋಲುತ್ತೆ

ಕಾಲಚಕ್ರ ಉರುಳುತ್ತಿದೆ, ನಾನು ನಾಲ್ಕು ಬಾರಿ ಗೆದ್ದಿದ್ದೇನೆ ಈ ಬಾರಿ ಸೋತಿದ್ದೇನೆ, ಗೆದ್ದವರು ಸೋಲುತ್ತಾರ, ಸೋತವರು ಗೆಲ್ಲುತ್ತಾರೆ, ಸದ್ಯ ನಾವೀಗ ಕಾಂಗ್ರೆಸ್‌ನಲ್ಲಿದ್ದೇವೆ, ನಾವು ಸೋತಿದ್ದೇವೆ, ಎಜಡಿಎಸ್ ನವರು ಗೆದ್ದಿದ್ದಾರೆ.ಮುಂದೆ ನಾವು ಗೆಲ್ತೀವಿ, ಜೆಡಿಎಸ್ ನವರು ಸೋಲುತ್ತಾರೆ ಎಂದು ಮಾಜಿ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿದ್ದಾರೆ.

 ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗ್ತೇನೆ ಎಂದಿದ್ದು ಏಕೆ?

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗ್ತೇನೆ ಎಂದಿದ್ದು ಏಕೆ?

ಸಿದ್ದರಾಮಯ್ಯ ಅವರಿಗೆ ಮತ್ತೆ ಮುಖ್ಯಮಂತ್ರಿಯಾಗುವ ಕನಸನ್ನು ಜನರ ಮುಂದೆಯೇ ತೆರದಿಟ್ಟಿದ್ದಾರೆ, ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2023ಕ್ಕೆ ಮುಖ್ಯಮಂತ್ರಿಯಾಗುತ್ತೇನೆ ಎಂದು ನಾನು ಹೇಳಿದ್ದು ಎಂದು ಸಮಜಾಯಿಷಿ ಕೊಟ್ಟಿದ್ದರು. ಇದೀಗ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ನಿಜವಾಗಿಯೂ ಅವರು ಮತ್ತೆ ಮುಖ್ಯಮಂತ್ರಿಯಾಗುವ ಸುಳಿವೇನಾದರೂ ಅವರಿಗೆ ದೊರೆತಿದೆಯೇ ಹಾಗಾಗಿಯೇ ಅವರು ಈ ರೀತಿ ಹೇಳಿಕೆ ನೀಡುತ್ತಿರಬಹುದು ಎನ್ನುವ ಗೊಂದಲಗಳು ಸೃಷ್ಟಿಯಾಗಿದೆ.

English summary
Agriculture minister N.H.Shivashankar reddy said that the party MLAs were committed to make Siddaramaiah as chief minister if coordination committee decide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X