ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ವರ್ಗಾವಣೆ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 22 : ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ಸೇರಿದಂತೆ ಕೆಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಎನ್‌. ಮಂಜುನಾಥ ಪ್ರಸಾದ್‌ ಅವರನ್ನು ಬಿಬಿಎಂಪಿಯ ನೂತನ ಆಯುಕ್ತರಾಗಿ ನೇಮಿಸಲಾಗಿದೆ.

ಗುರುವಾರ ಸಂಜೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಕುಮಾರ್ ನಾಯಕ್ ಅವರನ್ನು ಕರ್ನಾಟಕ ವಿದ್ಯುತ್‌ ನಿಗಮದ (ಕೆಪಿಸಿಎಲ್‌) ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. [ಐಎಎಸ್ ಅಧಿಕಾರಿಗಳ ಬಡ್ತಿ, ವರ್ಗಾವಣೆ ಪಟ್ಟಿ]

bbmp

2015ರ ಏಪ್ರಿಲ್ 20ರಂದು ಕುಮಾರ್ ನಾಯಕ್ ಅವರು ಬಿಬಿಎಂಪಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. 1990ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ಬೆಂಗಳೂರು ನಗರದವರು. ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲಾ ಮತ್ತು ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಅವರು ವ್ಯಾಸಂಗ ಮಾಡಿದ್ದಾರೆ. ಹುಣಸೂರು, ಕುಮುಟಾದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ಕೆಲಸ ಮಾಡಿದ್ದಾರೆ.[ಕುಮಾರ್ ನಾಯಕ್ ಪರಿಚಯ]

ವರ್ಗಾವಣೆಗೊಂಡ ಅಧಿಕಾರಿಗಳು : ಕೃಷಿ ಕಾರ್ಯದರ್ಶಿಯಾಗಿದ್ದ ಎನ್.ಮಂಜುನಾಥ ಪ್ರಸಾದ್ ಅವರನ್ನು ಬಿಬಿಎಂಪಿ ಆಯುಕ್ತರಾಗಿ ನೇಮಿಸಲಾಗಿದೆ. ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ಮಹೇಶ್ವರರಾವ್ ಅವರನ್ನು ಕೃಷಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಹಗರಣ ಹೊರಬರಲು ಕಾರಣರಾಗಿದ್ದ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎನ್‌.ಕೃಷ್ಣಮೂರ್ತಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಶ್ರೀನಿವಾಸ್ ಅವರನ್ನು ನೇಮಿಸಲಾಗಿದೆ. ಕೃಷ್ಣಮೂರ್ತಿ ಅವರಿಗೆ ಇನ್ನೂ ಯಾವುದೇ ಹುದ್ದೆ ನೀಡಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

Read in English: BBMP gets new Commissioner
English summary
Karnataka government transferred a Bruhat Bengaluru Mahanagara Palike (BBMP) commissioner G. Kumar Naik on April 21st 2016. N Manjunath Prasad new commissioner for BBMP.
Please Wait while comments are loading...