ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಸಂತೋಷ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 01 : ಬಿ.ಎಸ್.ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಎನ್.ಆರ್.ಸಂತೋಷ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ಜಾಮೀನು ರದ್ಧತಿ ಅರ್ಜಿ ವಿಚಾರಣೆ ಮುಂದೂಡಿಕೆ, ಸಂತೋಷ್‌ಗೆ ರಿಲೀಫ್ಜಾಮೀನು ರದ್ಧತಿ ಅರ್ಜಿ ವಿಚಾರಣೆ ಮುಂದೂಡಿಕೆ, ಸಂತೋಷ್‌ಗೆ ರಿಲೀಫ್

ಕೆ.ಎಸ್.ಈಶ್ವರಪ್ಪ ಆಪ್ತ ಕಾರ್ಯದರ್ಶಿ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಎನ್.ಆರ್.ಸಂತೋಷ್ ಆರೋಪಿ. ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿರುವ ಅವರು, ಪೊಲೀಸ್ ವಿಚಾರಣೆ ಎದುರಿಸುತ್ತಿದ್ದಾರೆ.

 N.R.Santosh moves high court seeking fir quash

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಎರಡು ದಿನಗಳ ಕಾಲ ಸಂತೋಷ್ ವಿಚಾರಣೆ ನಡೆಸಿದ್ದರು. ಪ್ರಕರಣದಲ್ಲಿ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂತೋಷ್ ಅವರು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಮನವಿ ಮಾಡಿದರು.

ಕೆಎಸ್ ಈಶ್ವರಪ್ಪ ಅವರ ಪಿಎ ವಿನಯ್ ರನ್ನು ಅಪಹರಿಸಲು ಯತ್ನಕೆಎಸ್ ಈಶ್ವರಪ್ಪ ಅವರ ಪಿಎ ವಿನಯ್ ರನ್ನು ಅಪಹರಿಸಲು ಯತ್ನ

ಈಗಾಗಲೇ ಸಂತೋಷ್ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಆರೋಪಿಸಿದ್ದಾರೆ. ಜಾಮೀನು ರದ್ಧತಿ ಕೋರಿ 62ನೇ ಸೆಷನ್ಸ್ ನ್ಯಾಯಲಕ್ಕೆ ಮನವಿ ಮಾಡಿದ್ದಾರೆ.

ನಿರೀಕ್ಷಣಾ ಜಾಮೀನು ನೀಡುವಾಗ ತನಿಖೆಗೆ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಲಾಗಿತ್ತು. ಆದರೆ, ಅದನ್ನು ಅವರು ಪಾಲಿಸುತ್ತಿಲ್ಲ ಎಂದು ಪೊಲೀಸರು ಹೇಳಿದ್ದು, ಜಾಮೀನು ರದ್ಧತಿ ಕೋರಿದ್ದಾರೆ.

English summary
N.R.Santosh moved the High Court of Karnataka seeking quash of FIR registered against him in K.S.Eshwarappa personal assistant Vinay kidnap attempt case. Mahalakshmi layout police registered FIR against N.R.Santosh who main accused in the case. Santosh personal assistant of B.S.Yeddyurapa
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X