ಕನ್ನಡಿಗರ ಹೋರಾಟ, ಮೆಟ್ರೋದ ಹಿಂದಿ ಫಲಕ ತೆರವು

Posted By: Gururaj
Subscribe to Oneindia Kannada

ಬೆಂಗಳೂರು, ಆ.4 : ನಮ್ಮ ಮೆಟ್ರೋದಲ್ಲಿನ ಹಿಂದಿ ಹೇರಿಕೆ ಬಗ್ಗೆ ನಡೆದ ಹೋರಾಟ ಫಲ ನೀಡಿದೆ. ಮೆಟ್ರೋ ನಿಲ್ದಾಣಗಳಲ್ಲಿನ ಹಿಂದಿ ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ.

ಮೆಟ್ರೋದಲ್ಲಿ ಹಿಂದಿ ಬಳಸಲು ಸಾಧ್ಯವಿಲ್ಲ - ಕೇಂದ್ರಕ್ಕೆ ಸಿಎಂ ಪತ್ರ

ಚಿಕ್ಕಪೇಟೆ ಸೇರಿದಂತೆ ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿನ ನಾಮಫಲಕಗಳನ್ನು ಇಂದು ತೆರವು ಮಾಡಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿರುವ ಫಲಕಗಳನ್ನು ಅಳವಡಿಸಲಾಗುತ್ತಿದೆ.

Namma metro station Hindi signboard removed

ಬೆಂಗಳೂರಿನ ನಮ್ಮ ಮೆಟ್ರೋ ಮೇಲೆ ಹಿಂದಿ ಹೇರಿಕೆ ಮಾಡುವುದನ್ನು ಖಂಡಿಸಿ ಬೃಹತ್ ಹೋರಾಟ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಹಿಂದಿ ಹೇರಿಕೆಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇಂಗ್ಲಿಷ್ ಮತ್ತು ಕನ್ನಡದಲ್ಲಿರುವ ನಾಮಫಲಕಗಳನ್ನು ಮಾತ್ರ ಹಾಕಲಾಗುತ್ತದೆ ಎಂದು ಹೇಳಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
After the protest against Hindi signboards in Bengaluru Namma metro stations, authorities removed the signboards from metro stations.
Please Wait while comments are loading...